• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದತ್ತ ಜಯಂತಿ ಆಚರಣೆ ಮುಂದಿನ ವರ್ಷದಿಂದ ನಿಷೇಧ ?

By Staff
|

ಚಿಕ್ಕಮಗಳೂರು : ಬಾಬಾಬುಡನ್‌ಗಿರಿಯಲ್ಲಿ ಪ್ರತಿ ವರ್ಷವೂ ನಡೆಯುತ್ತಿರುವ ದತ್ತ ಜಯಂತಿ ಆಚರಣೆಯನ್ನು ಮುಂದಿನ ವರ್ಷದಿಂದ ರದ್ದುಪಡಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಡಿ. ಬಿ. ಚಂದ್ರೇಗೌಡ ತಿಳಿಸಿದ್ದಾರೆ.

ದತ್ತಪೀಠದಲ್ಲಿ ದತ್ತಾತ್ರೇಯ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ದತ್ತ ಉತ್ಸವಕ್ಕೂ ಬೇಕಾದ ವ್ಯವಸ್ಥೆಗಲನ್ನು ಸರ್ಕಾರ ಕಲ್ಪಿಸಿದೆ. ಆದರೆ ಕೆಲವು ಸಮುದಾಯದವರು ಈ ವ್ಯವಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿರುವುದರಿಂದ ದತ್ತ ಜಯಂತಿ ಉತ್ಸವವನ್ನು ನಿಲ್ಲಿಸುವ ಪ್ರಸ್ತಾವನೆ ಸರಕಾರದ ಮುಂದಿದೆ ಎಂದು ಚಂದ್ರೇಗೌಡ ಹೇಳಿದರು.

ಇತ್ತೀಚೆಗಷ್ಟೇ ವಿಶ್ವಹಿಂದೂ ಪರಿಷತ್‌ನ ಮುಖಂಡ ಪ್ರವೀಣ್‌ ತೊಗಾಡಿಯಾ ಬಾಬಾ ಬುಡನ್‌ ಗಿರಿಯನ್ನು ಕರ್ನಾಟಕದ ಅಯೋಧ್ಯೆಯನ್ನಾಗಿ ಮಾಡಲಾಗುವುದು ಎಂದು ಘೋಷಿಸಿದ್ದರು. ಇಂತಹ ಹೇಳಿಕೆಗಳಿಂದ ಜನರಲ್ಲಿ ಗೊಂದಲ ಹಾಗೂ ಪರಸ್ಪರ ಅಪನಂಬಿಕೆಗಳು ಹೆಚ್ಚಾಗುತ್ತವೆ ಎಂದು ಸಚಿವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಾಬಾಬುಡನ್‌ಗಿರಿಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಹೋಟೆಲ್‌ ನಿರ್ಮಾಣದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ- ಹೋಟೆಲ್‌ ನಿರ್ಮಿಸುವುದು ಸುಲಭ. ಆದರೆ ಸೂಕ್ಷ್ಮ ಸಂದರ್ಭಗಳಲ್ಲಿ ಹೋಟೆಲ್‌ ನಿರ್ವಹಣೆ ಕಷ್ಟವಾಗುತ್ತದೆ. ಸ್ಥಳೀಯ ನಾಯಕರೊಡನೆ ಚರ್ಚಿಸಿದ ನಂತರ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಉತ್ತರಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more