ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

13 ರಾಜ್ಯಗಳ ವಲಸೆ ಹಕ್ಕಿಗಳಿಗೆ ಗುರುತಿನ ಚೀಟಿ

By Staff
|
Google Oneindia Kannada News

ನವ ದೆಹಲಿ : ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಕಾನೂಬಾಹಿರ ವಲಸಿಗರಿಂದ ದೇಶದ ಆಂತರಿಕ ಭದ್ರತೆಗೆ ಉಂಟಾಗುತ್ತಿರುವ ಆತಂಕವನ್ನು ನಿವಾರಿಸುವ ಉದ್ದೇಶದಿಂದ 13 ರಾಜ್ಯಗಳಲ್ಲಿ ನೆಲೆಸಿರುವ ವಲಸೆ ಹಕ್ಕಿಗಳಿಗೆ ರಾಷ್ಟ್ರೀಯ ಗುರುತಿನ ಚೀಟಿಗಳನ್ನು ವಿತರಿಸುವ ನಿರ್ಣಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಂದಿವೆ.

ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಜ.7ರ ಮಂಗಳವಾರ ನಡೆದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್‌ ಮಹಾ ನಿರ್ದೇಶಕರುಗಳ ಸಭೆ ರಾಷ್ಟ್ರೀಯ ಗುರುತಿನ ಚೀಟಿಗಳನ್ನು ವಿತರಿಸುವ ತೀರ್ಮಾನ ಕೈಗೊಂಡಿತು.

ಆಂಧ್ರ ಪ್ರದೇಶ, ತಮಿಳುನಾಡು, ಗುಜರಾತ್‌, ಜಮ್ಮು ಮತ್ತು ಕಾಶ್ಮೀರ, ಉತ್ತರಾಂಚಲ, ರಾಜಸ್ತಾನ, ಉತ್ತರ ಪ್ರದೇಶ, ಅಸ್ಸಾಂ, ಪಶ್ಚಿಮ ಬಂಗಾಳ, ತ್ರಿಪುರ, ಗೋವಾ, ಪಾಂಡಿಚೆರಿ ಹಾಗೂ ದೆಹಲಿ ರಾಜ್ಯಗಳಲ್ಲಿ ಗುರುತಿನ ಚೀಟಿಗಳನ್ನು ವಿತರಿಸಲಾಗುವುದು.

28.5 ಲಕ್ಷ ಮಂದಿಗೆ ರಾಷ್ಟ್ರೀಯ ಗುರುತಿನ ಚೀಟಿ ನೀಡುವ ಕಾರ್ಯ ಏಪ್ರಿಲ್‌ 1 ರಿಂದ ಪ್ರಾರಂಭವಾಗಲಿದ್ದು , ಈ ಯೋಜನೆಗೆ 14 ಕೋಟಿ ರುಪಾಯಿ ಖರ್ಚು ತಗುಲಲಿದೆ.

(ಏಜೆನ್ಸೀಸ್‌)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X