ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆನೆಗೊಂದಿ ಉತ್ಸವಕ್ಕೆ ಸಜ್ಜುಗೊಳ್ಳುತ್ತಿರುವ ಗಂಗಾವತಿ

By Staff
|
Google Oneindia Kannada News

ಗಂಗಾವತಿ: ಫೆಬ್ರವರಿ 2 ಮತ್ತು 3ರಂದು ಆನೆಗುಂದಿ ಉತ್ಸವವನ್ನು ನಡೆಸಲು ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಚಿವ ಎಂ. ಮಲ್ಲಿಕಾರ್ಜುನ ನಾಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಡಳಿತ ಕರೆದಿದ್ದ ಆನೆಗೊಂದಿ ಉತ್ಸವ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ನಾಗಲಾಂಬಿಕಾ ದೇವಿ ಕಳೆದ ವರ್ಷದಂತೆಯೇ ಈ ಬಾರಿಯೂ ಆನೆಗೊಂದಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದರು.

ಎರಡು ದಿನಗಳ ಈ ಮೇಳದಲ್ಲಿ ಹೊರ ಮತ್ತು ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಗ್ರಾಮೀಣ ಕ್ರೀಡಾ ಕೂಟ, ಕವಿಗೋಷ್ಠಿ ಮತ್ತು ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ನಾಗಲಾಂಬಿಕಾ ದೇವಿ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X