ಫೆ.8ರಿಂದ ಕಾಗಿನೆಲೆ ಕನಕ ಗುರುಪೀಠ ಉತ್ಸವ
ಬೆಂಗಳೂರು: ಶ್ರೀ ಕಾಗಿನೆಲೆ ಮಹಾಸಂಸ್ಥಾನದ ಹೊಸದುರ್ಗ ಶಾಖಾ ಮಠದಲ್ಲಿ ಫೆ. 8 ಮತ್ತು 9ರಂದು ಕನಕ ಗುರುಪೀಠದ ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಸ್ವಾಮೀಜಿ 11ನೇ ಪಟ್ಟಾಭಿಷೇಕ ಮಹೋತ್ಸವ ನಡೆಯಲಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಈಶ್ವರಾನಂದ ಪುರಿಯವರು, ಇದೇ ಸಂದರ್ಭದಲ್ಲಿ ಅಖಿಲ ಕರ್ನಾಟಕ ಕನಕ ಸಾಹಿತ್ಯ ಸಮ್ಮೇಳನವೂ ನಡೆಯಲಿದೆ ಎಂದರು. ಫೆ. 9ರಂದು ನಡೆಯುವ ಧಾರ್ಮಿಕ ಸಮ್ಮೇಳನದಲ್ಲಿ ಎಲ್ಲ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ. ಹಂಪಿ ವಿಶ್ವ ವಿದ್ಯಾಲಯದ ಡಾ. ಎಚ್. ಜೆ. ಲಕ್ಕಪ್ಪಗೌಡ ಸಮಾವೇಶದ ಅಧ್ಯಕ್ಷತೆ ವಹಿಸುವರು.
ಹಿಂದುಳಿದ ವರ್ಗದ ಉಚಿತ ದಾಸೋಹ ಮತ್ತು ಶಿಕ್ಷಣ ನೀಡುವ ಯೋಜನೆಯಡಿಯಲ್ಲಿ 100 ಬಡ ಮಕ್ಕಳನ್ನು ಇದೇ ಸಂದರ್ಭದಲ್ಲಿ ದತ್ತು ತೆಗೆದುಕೊಳ್ಳಲಾಗುವುದು. ಸುದ್ದಿಗೋಷ್ಠಿಯಲ್ಲಿ ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಸ್ವಾಮೀಜಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications