ರಸ್ತೆ ಅವಘಡ ; ಸಚಿವ ಡಿಕೇಶಿ ಪ್ರಾಣಾಪಾಯದಿಂದ ಪಾರು

ಬೆಂಗಳೂರು : ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಅವರು ಪ್ರಯಾಣಿಸುತ್ತಿದ್ದ ಕಾರು ಫೆ.24ರ ಬೆಳಗ್ಗೆ ಅಪಘಾತಕ್ಕೀಡಾಗಿದ್ದು , ಶಿವಕುಮಾರ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಿಜಾಪುರದ ಸಮೀಪ ಈ ಅಪಘಾತ ಸಂಭವಿಸಿದೆ. ರಸ್ತೆ ಬದಿಯ ಕಾಂಕ್ರೀಟ್‌ ನಿರ್ಮಾಣವೊಂದಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಸಚಿವ ಶಿವಕುಮಾರ್‌ ಅವರೊಂದಿಗೆ ಇತರ ಮೂವರು ಕಾಂಗ್ರೆಸ್‌ ಮುಖಂಡರು ಪ್ರಯಾಣಿಸುತ್ತಿದ್ದು , ಅವರಿಗೂ ಗಾಯಗಳಾಗಿವೆ. ಬಿಜಾಪುರದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ.

ಹುಮ್ನಾಬಾದ್‌ ವಿಧಾನಸಭಾ ಕ್ಷೇತ್ರದಲ್ಲಿನ ಮರು ಚುನಾವಣೆ ಪ್ರಚಾರ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಡಿ.ಕೆ.ಶಿವಕುಮಾರ್‌ ಸೋಮವಾರ ಬೆಳಗ್ಗೆ ನಗರಕ್ಕೆ ಹಿಂದಿರುಗುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

ಖಾಸಗಿ ಹೆಲಿಕ್ಯಾಪ್ಟರೊಂದು ಬಿಜಾಪುರಕ್ಕೆ ತೆರಳಿದ್ದು , ಶಿವಕುಮಾರ್‌ ಅವರನ್ನು ಬೆಂಗಳೂರಿಗೆ ಕರೆತಂದಿದೆ.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+