• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಿಂದೂದೇಗುಲಗಳ ಏಕ ರೂಪದ ಶಾಸನಕ್ಕೆ ವಿರೋಧ

By Staff
|

ಗೋಕರ್ಣ: ಸದ್ಯದಲ್ಲೇ ಜಾರಿಗೊಳ್ಳಲಿರುವ ಹಿಂದೂ ದೇಗುಲಗಳ ಏಕ ರೂಪದ ಶಾಸನದ ಪ್ರಸ್ತಾವನೆಯನ್ನು ಉತ್ತರ ಕನ್ನಡ ಜಿಲ್ಲಾ ಹಿಂದೂ ದೇವಾಲಯಗಳ ಆಡಳಿತ ಸುಧಾರಣಾ ಸಮಿತಿಯು ವಿರೋಧಿಸಿದೆ.

ಈ ಶಾಸನದ ಜಾರಿಯಿಂದಾಗಿ ದೇಗುಲಗಳ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗಬಹುದು. ಈ ಶಾಸನ ಕುರಿತಂತೆ ವ್ಯಾಪಕ ಚರ್ಚೆ ನಡೆದ ನಂತರ ಅದರಲ್ಲಿ ಸೂಕ್ತ ಬದಲಾವಣೆಗಳನ್ನು ತರಬೇಕು. ಆ ಬಳಿಕ ಶಾಸನ ಜಾರಿಯಾಗಬೇಕು ಎಂದು ಸಮಿತಿಯು ಸ್ವರ್ಣವಲ್ಲೀ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ಸರಕಾರವನ್ನು ಆಗ್ರಹಿಸಿದೆ.

ಉದ್ದೇಶಿತ ಶಾಸನವನ್ನು ತಕ್ಷಣವೇ ವಾಪಾಸು ಪಡೆಯುವಂತೆ ಹಾಗೂ ಪ್ರತಿಕೂಲವಾದ ಶಾಸನಗಳನ್ನು ಜಾರಿಗೊಳಿಸದಂತೆ ಕಾರ್ಯಾಂಗ ಹಾಗೂ ನ್ಯಾಯಾಂಗಗಳಿಗೂ ಮನವಿ ಸಲ್ಲಿಸಲಾಗಿದೆ. ರಾಜ್ಯ ಸಚಿವ ಸಂಪುಟಕ್ಕೂ ಈ ಬಗ್ಗೆ ಮನವರಿಕೆ ಮಾಡಲಾಗುವುದು ಎಂದು ಸಮಿತಿಯ ಅಧ್ಯಕ್ಷ ಗೋಕರ್ಣ ಮಹಾಬಲೇಶ್ವರ ಮಂದಿರದ ವ್ಯವಸ್ಥಾಪಕ ಧರ್ಮದರ್ಶಿ ವಿ. ಡಿ. ದೀಕ್ಷಿತ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more