ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಜೆಕೆ ಟೈರ್ಸ್ ಜೊತೆ ಮೈಸೂರಿನ ವಿಕ್ರಾಂತ್ ಟೈರ್ಸ್ ವಿಲೀನ
ಬೆಂಗಳೂರು : ಮೈಸೂರಿನ ವಿಕ್ರಾಂತ್ ಟೈರ್ಸ್ ಸಂಸ್ಥೆಯನ್ನು ಜೆಕೆ ಟೈರ್ಸ್ನೊಂದಿಗೆ ವಿಲೀನಗೊಳಿಸುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅಂಕಿತ ಹಾಕಿದೆ.
ರಾಜ್ಯ ಸರ್ಕಾರದ ಪ್ರತಿಶತ 8 ರ ಷೇರನ್ನು ಉಳಿಸಿಕೊಳ್ಳುವುದರೊಂದಿಗೆ ಎರಡೂ ಸಂಸ್ಥೆಗಳ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿರುವ ವಿಷಯವನ್ನು ವಾರ್ತಾ ಸಚಿವ ಕಾಗೋಡು ತಿಮ್ಮಪ್ಪ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ಕಾರ್ಮಿಕರ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಆಡಳಿತ ಮಂಡಳಿಯಲ್ಲಿ ಸರ್ಕಾರದಿಂದ ನೇಮಕ ಹೊಂದಿದ ಪ್ರತಿನಿಧಿಗಳೂ ಇರುತ್ತಾರೆ ಎಂದು ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Friday, April 11, 2003, 5:30 [IST]