ದಾವಣಗೆರೆಯಲ್ಲಿ ವಿಶ್ವ ರೈತ ಹುತಾತ್ಮರ ದಿನಾಚರಣೆ
ದಾವಣಗೆರೆ : ವಿಶ್ವ ರೈತ ಹುತಾತ್ಮರ ದಿನಾಚರಣೆ ಏಪ್ರಿಲ್ 17ರಂದು ದಾವಣಗೆರೆಯಲ್ಲಿ ನಡೆಯಲಿದೆ. ಪ್ರೊ.ಎಂ.ಡಿ.ನಂಜುಂಡ ಸ್ವಾಮಿ ನೇತೃತ್ವದ ರಾಜ್ಯ ರೈತ ಸಂಘದ ಬಣ ಈ ಕಾರ್ಯಕ್ರಮವನ್ನು ಏರ್ಪಡಿಸಿದೆ.
ರೈತ ಹುತಾತ್ಮ ದಿನಾಚರಣೆಯನ್ನು ಯಶಸ್ವಿಯಾಗಿ ನಡೆಸಲು ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್ ಹಾಗೂ ಕಾರ್ಯಾಧ್ಯಕ್ಷ ಹೊನ್ನೂರು ಮುನಿಯಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಹುಚ್ಚವ್ವನ ಹಳ್ಳಿ ಮಂಜುನಾಥ್ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ.
ವಿಶ್ವ ರೈತ ಹುತಾತ್ಮ ದಿನಾಚರಣೆಯಲ್ಲಿ ಭಾಗವಹಿಸಲು ಸಾವಿರಾರು ರೈತರು ದಾವಣಗೆರೆಗೆ ಆಗಮಿಸುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ದಾವಣಗೆರೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರ ಬೈಕ್ ರ್ಯಾಲಿ ಇತ್ತೀಚೆಗೆ ನಡೆಯಿತು. ಈ ರ್ಯಾಲಿಗೆ ನಂಜುಂಡ ಸ್ವಾಮಿ ಹಸಿರು ನಿಶಾನೆ ತೋರಿಸಿದ್ದರು.
ರೈತರ ಸಂಕಷ್ಟಗಳು ಹಾಗೂ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲು ವಿಶ್ವ ರೈತ ಹುತಾತ್ಮರ ದಿನಾಚರಣೆ ವೇದಿಕೆಯಾಗುವ ನಿರೀಕ್ಷೆಯಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications