ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ2ರಂದು ಬ್ಯಾಂಕ್‌ ನೌಕರರ 1 ದಿನದ ಮುಷ್ಕರ

By Staff
|
Google Oneindia Kannada News

ಬೆಂಗಳೂರು : ವೇತನ ಪರಿಷ್ಕರಣೆ, ಪಿಂಚಣಿ ಹಾಗೂ ಇನ್ನಿತರೆ ಬೇಡಿಕೆಗಳನ್ನು ಮುಂದಿಟ್ಟು ಮೇ 2 ರ ಶುಕ್ರವಾರ ಬ್ಯಾಂಕ್‌ ನೌಕರರು ಒಂದು ದಿನದ ಸಾಂಕೇತಿಕ ಮುಷ್ಕರ ನಡೆಸಲಿದ್ದಾರೆ.

ಅಖಿಲ ಭಾರತ ಬ್ಯಾಂಕ್‌ ಅಧಿಕಾರಿಗಳ ಒಕ್ಕೂಟ, ಬ್ಯಾಂಕ್‌ ಅಧಿಕಾರಿಗಳ ರಾಷ್ಟ್ರೀಯ ಸಂಸ್ಥೆ ಮೇ 2 ರ ಮುಷ್ಕರಕ್ಕೆ ಕರೆ ಕೊಟ್ಟಿವೆ.

ಐದು ವರ್ಷಗಳ ಹಿಂದೆ ಸಹಿ ಮಾಡಿದ್ದ ವೇತನ ಪರಿಷ್ಕರಣೆಯ ಒಪ್ಪಂದ ಕಳೆದ ವರ್ಷದ ಅಕ್ಟೋಬರ್‌ 31 ಕ್ಕೇ ಕೊನೆಗೊಂಡಿದೆ. ಆ ಕಾರಣದಿಂದಾಗಿ ವೇತನ ಪರಿಷ್ಕರಣೆ ಹಾಗೂ ಇನ್ನಿತರೆ ಬೇಡಿಕೆಗಳನ್ನು ಮುಂದಿಟ್ಟು ಮೇ 2 ರಂದು ಮುಷ್ಕರ ನಡೆಸಲಾಗುವುದು ಎಂದು ಬ್ಯಾಂಕ್‌ ಅಧಿಕಾರಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಾಂತರಾಜು ಸುದ್ದಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಷ್ಕರಕ್ಕೆ ಕರೆ ನೀಡಿರುವ ಸಂಘಟನೆಗಳು ಬ್ಯಾಂಕ್‌ ಉದ್ಯಮದ ಪ್ರತಿಶತ 100 ನೌಕರರನ್ನು ಪ್ರತಿನಿಧಿಸುತ್ತಿದ್ದು - ಮುಷ್ಕರ ಯಶಸ್ಸು ಕಾಣುತ್ತದೆ ಎಂದು ಶಾಂತರಾಜು ಹೇಳಿದ್ದಾರೆ.

ಭಾರತೀಯ ಬ್ಯಾಂಕುಗಳ ಸಂಸ್ಥೆಯಾಂದಿಗೆ ಈಗಾಗಲೇ 6 ಸುತ್ತುಗಳ ಮಾತುಕತೆ ನಡೆಸಿದ್ದರೂ ಯಾವುದೇ ಉಪಯೋಗವಾಗಿಲ್ಲ. ಕಳೆದ ಎರಡು ತಿಂಗಳಲ್ಲಿ ಬ್ಯಾಂಕ್‌ ಅಧಿಕಾರಿಗಳ ಅನೇಕ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿರುವುದು ಉಪಯೋಗಕ್ಕೆ ಬಂದಿಲ್ಲ ಎಂದು ಅವರು ಆಪಾದಿಸಿದ್ದಾರೆ.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X