ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

8 ರಾಷ್ಟ್ರಗಳಲ್ಲಿನ ಎನ್‌ಆರ್‌ಐಗಳಿಗೆ ದ್ವಿಪೌರತ್ವ

By Staff
|
Google Oneindia Kannada News

ನವದೆಹಲಿ : ಅಮೆರಿಕಾದ ಸಂಯುಕ್ತ ಸಂಸ್ಥಾನಗಳು, ಯುನೈಟೆಡ್‌ ಕಿಂಗ್‌ಡಂ ಮತ್ತು ಇತರ ಆರು ದೇಶಗಳಲ್ಲಿ ನೆಲೆಸಿರುವ ಭಾರತೀಯ ಮೂಲದ ನಾಗರಿಕರಿಗೆ ದ್ವಿಪೌರತ್ವ ನೀಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಕೇಂದ್ರ ಸರ್ಕಾರದ ನಿರ್ಧಾರದ ಪ್ರಕಾರ ಅಮೆರಿಕಾ, ಯುಕೆ ಮತ್ತಿತರ ದೇಶಗಳಲ್ಲಿ ನೆಲೆಸಿರುವ ಭಾರತೀಯರು ದ್ವಿಪೌರತ್ವ ಕೋರಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಅರ್ಜಿ ಗಳನ್ನು ವಿವರವಾಗಿ ಪರಿಶೀಲಿಸಿದ ನಂತರ ಭಾರತ ಸರಕಾರ ದ್ವಿಪೌರತ್ವ ನೀಡುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾದ ಈ ನಿರ್ಣಯದಿಂದಾಗಿ ಅನೇಕ ದಿನಗಳಿಂದ ನಡೆಯುತ್ತಿದ್ದ ದ್ವಿಪೌರತ್ವ ಕುರಿತ ಚರ್ಚೆಗೆ ತೆರೆ ಬಿದ್ದಂತಾಗಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X