• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಕ್ಕು ಮಂಡನೆ ಬಿಡಿ, ಕೆಲಸಕ್ಕೆ ನಡಿ-ನಾರಾಯಣಮೂರ್ತಿ

By Staff
|

ಹುಬ್ಬಳ್ಳಿ : ಜಾಗತೀಕರಣಕ್ಕೆ ಎದೆಗೊಟ್ಟು ಈಜಲು ಯುವಜನರು ಸವಾಲು ಎದುರಿಸುವ ಮನೋಭಾವ ಬೆಳೆಸಿಕೊಳ್ಳದಿದ್ದರೆ ಅವರ ಭವಿತವ್ಯ ಶೂನ್ಯವಾಗಲಿದೆ ಎಂದು ಇನ್ಫೋಸಿಸ್‌ ರಾಜಗುರು ಎನ್‌.ಆರ್‌.ನಾರಾಯಣ ಮೂರ್ತಿ ಅಭಿಪ್ರಾಯ ಪಟ್ಟರು.

ತಮ್ಮ ಪತ್ನಿ ಸುಧಾಮೂರ್ತಿ ಓದಿದ ನಗರದ ಕೆ.ಎಲ್‌.ಇ. ಸಂಸ್ಥೆಯ ಬಿ.ವಿ.ಭೂಮರೆಡ್ಡಿ ಮಹಾವಿದ್ಯಾಲಯದ ಆವರಣದಲ್ಲಿ 5 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕೇಂದ್ರ ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ಕಟ್ಟಡ ಸಮುಚ್ಛಯ ಉದ್ಘಾಟಿಸಿ ಶುಕ್ರವಾರ ಅವರು ಮಾತಾಡುತ್ತಿದ್ದರು. ನಮ್ಮ ದೇಶದಲ್ಲಿ ಕರ್ತವ್ಯಕ್ಕಿಂತ ಹಕ್ಕುಗಳನ್ನು ಪ್ರತಿಪಾದಿಸುವವರೇ ಹೆಚ್ಚು. ಆದರೆ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಪ್ರಜೆಗಳಿಗೆ ತಮ್ಮ ಕರ್ತವ್ಯದ ಮಹತ್ವ ಏನು ಎಂಬುದು ಚೆನ್ನಾಗಿ ಗೊತ್ತಿದೆ ಎಂದರು.

ಭಾರತದಲ್ಲಿ ಪ್ರತಿಶತ 26ಕ್ಕೂ ಹೆಚ್ಚು ಜನ ಬಡತನ ರೇಖೆಯ ಕೆಳಗಿದ್ದಾರೆ. ಅನಕ್ಷರಸ್ಥರ ಸಂಖ್ಯೆ ಕೂಡ ಇದಕ್ಕಿಂತ ಹೆಚ್ಚು. ರಾಜಕಾರಣಿಗಳ ಬೇಜವಾಬ್ದಾರಿ ಹಾಗೂ ಭ್ರಷ್ಟಾಚಾರದಿಂದ ಇಡೀ ವ್ಯವಸ್ಥೆ ಹಾಳಾಗಿದೆ. ಈ ಎಲ್ಲಾ ದೌರ್ಬಲ್ಯಗಳನ್ನು ಮೆಟ್ಟಿ, ನಮ್ಮ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲು ಯುವಜನತೆ ತಾವು ಕಲಿಯುವ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ನಾರಾಯಣ ಮೂರ್ತಿ ಕರೆ ಕೊಟ್ಟರು.

ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿನಿಯಾಗಿ, ತಂತ್ರಜ್ಞಾನ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಇನ್ಫೋಸಿಸ್‌ ಪ್ರತಿಷ್ಠಾನದ ಧರ್ಮದರ್ಶಿ ಸುಧಾಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ನಂತರ, ಸುಧಾಮೂರ್ತಿ ತಮ್ಮ ಕಾಲೇಜು ದಿನಗಳ ಮಧುರ ಗಳಿಗೆಗಳನ್ನು ಮೆಲುಕು ಹಾಕಿದರು.

ತಾವು ಓದಿದ ಮಹಾವಿದ್ಯಾಲಯದ ಗ್ರಂಥಾಲಯಕ್ಕೆ ಮುಂದಿನ ಮೂರು ವರ್ಷಗಳಲ್ಲಿ 10 ಲಕ್ಷ ರುಪಾಯಿ ಬೆಲೆಯ ಪುಸ್ತಕ ಕೊಡುವುದಾಗಿ ಸುಧಾಮೂರ್ತಿ ಪ್ರಕಟಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೆ.ಎಲ್‌. ಇ. ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಕೋರೆ, ಇನ್ಫೋಸಿಸ್‌ ಕಂಪನಿಯಲ್ಲಿ ಹುಬ್ಬಳ್ಳಿ ಭಾಗದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಹಾಗೂ ಹುಬ್ಬಳ್ಳಿ ಅಥವಾ ಬೆಳಗಾವಿಯಲ್ಲಿ ಇನ್ಫೋಸಿಸ್‌ ಶಾಖೆ ತೆರೆಯಬೇಕೆಂದು ಕೋರಿದರು.

(ಇನ್ಫೋ ವಾರ್ತೆ)

ಮುಖಪುಟ / ಕರ್ನಾಟಕ ಸಿಲಿಕಾನ್‌ ಕಣಿವೆ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more