ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್‌ ಸಹಕಾರಿ ಬ್ಯಾಂಕ್‌ಗೆ 3.6 ಕೋಟಿ ಲಾಭ

By Staff
|
Google Oneindia Kannada News

ಬೀದರ್‌ : ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಪ್ರಸಕ್ತ ವರ್ಷ ಒಟ್ಟು 3. 67 ಕೋಟಿ ರೂಪಾಯಿ ಲಾಭ ಗಳಿಸಿದೆ.

ಪ್ರಸಕ್ತ ವರ್ಷದಲ್ಲಿ ಬ್ಯಾಂಕ್‌ ಒಟ್ಟು 697.45 ಕೋಟಿ ರೂಪಾಯಿ ವಹಿವಾಟು ನಡೆಸಿದ್ದು, ನಬಾರ್ಡ್‌, ಅಪೆಕ್ಸ್‌ ಬ್ಯಾಂಕ್‌ಗಳು ನಿಗದಿಪಡಿಸಿದ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ನಡೆಸಿದೆ. ಇಷ್ಟೇ ಅಲ್ಲದೆ ನಿಗದಿಪಡಿಸಲಾದ ಗುರಿಯನ್ನು ಯಶಸ್ವಿಯಾಗಿ ಸಾಧಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರು ಸುದ್ದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮೀಣ ಭಾಗದ ಬಹುತೇಕ ಹಳ್ಳಿಗಳಲ್ಲಿ ರೈತರ ಉತ್ಪನ್ನಗಳನ್ನು ಹೆಚ್ಚಿಸುವುದಕ್ಕಾಗಿ ವಿವಿ ಕ್ಲಬ್‌ಗಳನ್ನು ಸ್ಥಾಪಿಸಲಾಗಿದೆ. ರೈತರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿಗಾಗಿ ಬ್ಯಾಂಕು ಅನೇಕ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X