ಭದ್ರಾವತಿ ಉಕ್ಕಿನ ಕಾರ್ಖಾನೆಯಲ್ಲಿ ಸ್ಫೋಟ, 7ಮಂದಿ ಸಾವು

ಭದ್ರಾವತಿ ಉಕ್ಕಿನ ಕಾರ್ಖಾನೆಯಲ್ಲಿ ಸ್ಫೋಟ, 7ಮಂದಿ ಸಾವು
ಕುದಿ ಕುಲುಮೆಯಲ್ಲಿ ಸ್ಫೋಟ- ಒಂಭತ್ತು ಮಂದಿಗೆ ಗಾಯ

ಶಿವಮೊಗ್ಗ : ಭದ್ರಾವತಿಯಲ್ಲಿನ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯಲ್ಲಿ ಜುಲೈ 31ರ ಗುರುವಾರ ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದ್ದು , 7 ಮಂದಿ ಸಾವಿಗೀಡಾಗಿದ್ದಾರೆ.

ಸ್ಫೋಟವು ಘಟಕದ ಕುದಿ ಕುಲುಮೆಯಲ್ಲಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸ್ಫೋಟದಲ್ಲಿ 7 ಮಂದಿ ಸಾವಿಗೀಡಾಗಿದ್ದು , 9 ಮಂದಿ ಗಾಯಗೊಂಡಿದ್ದಾರೆ.

ಸಾವಿಗೀಡಾದ ಇಬ್ಬರನ್ನು - ಹಿರಿಯ ನಿರ್ವಹಣಾಧಿಕಾರಿ ಎಸ್‌. ಆರ್‌. ಶ್ರೀಧರ ಮೂರ್ತಿ ಮತ್ತು ಸಹ ನಿರ್ವಹಣಾಧಿಕಾರಿ ಬಿ. ಎಸ್‌. ಚಂದ್ರಶೇಖರ್‌ ಎಂದು ಗುರುತಿಸಲಾಗಿದೆ. ಉಳಿದ ಐವರು 11ರಿಂದ 7 ಗಂಟೆ ಅವಧಿಯ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 50 ವರ್ಷಕ್ಕೆ ಮೇಲ್ಪಟ್ಟ ವಯಸ್ಸಿನ ಕೆಲಸಗಾರರು.

ಸ್ಫೋಟದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಫೋಟದ ಬಗ್ಗೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

(ಪಿಟಿಐ)

ಮುಖಪುಟ / ವಾರ್ತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+