ಸಿಇಟಿ : ಮರು ಕೌನ್ಸೆಲಿಂಗ್, ಸೆಪ್ಟಂಬರ್ ಒಳಗೆ ಪ್ರವೇಶ ಪೂರ್ಣ
ಸಿಇಟಿ : ಮರು ಕೌನ್ಸೆಲಿಂಗ್, ಸೆಪ್ಟಂಬರ್ ಒಳಗೆ ಪ್ರವೇಶ ಪೂರ್ಣ
ಸೀಟು ಕಳೆದುಕೊಳ್ಳಲಿರುವ ಕರ್ನಾಟಕೇತರ ವಿದ್ಯಾರ್ಥಿಗಳು
ಕಾನೂನು ಸಚಿವ ಡಿ. ಬಿ. ಚಂದ್ರೇಗೌಡ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಜಿ. ಪರಮೇಶ್ವರ್ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮರು ಕೌನ್ಸೆಲಿಂಗ್ ಕುರಿತು ನಿರ್ಧರಿಸಲಾಯಿತು. ಕಳೆದ ವಾರ ಸಿಇಟಿ -ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕೋರ್ಟು ನೀಡಿದ ಆದೇಶದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರೇಗೌಡ, ಸಮಯದ ಅಭಾವ ಇರುವುದರಿಂದ ಸರಕಾರವು ಅಧಿಕಾರಿಗಳಿಗೆ ಹೊಸ ಸೀಟು ಮ್ಯಾಟ್ರಿಕ್ಸ್ ರೂಪಿಸಲು ತಿಳಿಸಿದೆ. ಇದರಿಂದ ಆದಷ್ಟು ಬೇಗನೇ ರೀಕೌನ್ಸೆಲಿಂಗ್ ನಡೆಸಲು ಅನುಕೂಲವಾಗಲಿದೆ ಎಂದರು.
ಸುಪ್ರಿಂಕೋರ್ಟು ಆದೇಶದ ಪ್ರಕಾರ ಈಗ ಕರ್ನಾಟಕೇತರ ವಿದ್ಯಾರ್ಥಿಗಳ ಹಾಗೂ ಪೇಮೆಂಟ್ ಸೀಟು ಕೋಟಾದಡಿ ಈಗಾಗಲೇ ಸೀಟು ಗಿಟ್ಟಿಸಿಕೊಂಡ ವಿದ್ಯಾರ್ಥಿಗಳು ತಮ್ಮ ಸೀಟು ಕಳೆದುಕೊಳ್ಳಲಿದ್ದಾರೆ. ಸೆಪ್ಟೆಂಬರ್ ಅಂತ್ಯದೊಳಗೆ ಪ್ರವೇಶ ಪ್ರಕ್ರಿಯೆಯನ್ನು ಮುಗಿಸಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ಮೊದಲನೇ ಸೆಮಿಸ್ಟರ್ ಪಾಠಕ್ಕೆ ಏನೂ ತೊಂದರೆಯಾಗುವುದಿಲ್ಲ. ಮುಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿಯೂ ಸಿಇಟಿ ಕುರಿತಂತೆ ಸುಪ್ರೀಂ ಕೋರ್ಟು ಆದೇಶದ ಬಗ್ಗೆ ಚರ್ಚಿಸಲಾಗುವುದು ಎಂದು ಚಂದ್ರೇಗೌಡ ಭರವಸೆ ನೀಡಿದರು.
ಈ ನಡುವೆ ಖಾಸಗಿ ವೃತ್ತಿ ಶಿಕ್ಷಣ ಕಾಲೇಜಿನ ನಿರ್ವಹಣಾಧಿಕಾರಿಗಳು ಸುಪ್ರಿಂ ಕೋರ್ಟು ತೀರ್ಪಿನ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚಿಸಲು ಆಗಸ್ಟ್ 21ರಂದು ಸಭೆ ಕರೆದಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications