ಸಿಇಟಿ: ಶುಕ್ರವಾರ ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಕೃಷ್ಣ ಮಾತುಕತೆ
ಸಿಇಟಿ: ಶುಕ್ರವಾರ ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಕೃಷ್ಣ ಮಾತುಕತೆ
ವಿದ್ಯಾರ್ಥಿಗಳ ಹಿತರಕ್ಷಣೆಗೆ ಸರ್ಕಾರದ ಒತ್ತು
ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳ ಹಿತರಕ್ಷಣೆ ಕುರಿತು ಆ.22ರ ಸಭೆಯಲ್ಲಿ ಮುಖ್ಯಮಂತ್ರಿ ಕೃಷ್ಣ ಒತ್ತು ನೀಡುವ ನಿರೀಕ್ಷೆಯಿದೆ. ಸರ್ಕಾರದೊಂದಿಗೆ ಭಿನ್ನಮತ ಹೊಂದಿದ್ದ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕಾಮೆಡ್-ಕೆ ಸೇರಿದಂತೆ ಎಲ್ಲಾ ಖಾಸಗಿ ಸಂಸ್ಥೆಗಳ ಮುಖ್ಯಸ್ಥರನ್ನು ಮುಖ್ಯಮಂತ್ರಿಗಳು ಮಾತುಕತೆಗೆ ಆಹ್ವಾನಿಸಿದ್ದಾರೆ ಎಂದು ಮುಖ್ಯಮಂತ್ರಿಳ ಕಚೇರಿ ಮೂಲಗಳು ತಿಳಿಸಿವೆ.
ಈ ಮುನ್ನ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಸೀಟುಗಳಿಗೆ ಪ್ರತಿಶತ 75ರಷ್ಟು ಪ್ರವೇಶ ಪ್ರಕ್ರಿಯೆಯನ್ನು ಸರ್ಕಾರ ಪೂರೈಸಿದೆ. ಈ ಸಂದರ್ಭದಲ್ಲಿ ಸುಪ್ರಿಂಕೋರ್ಟ್ ನೀಡಿರುವ ತೀರ್ಪಿನಿಂದಾಗಿ ಪ್ರವೇಶ ಪ್ರಕ್ರಿಯೆಯನ್ನು ಹೊಸತಾಗಿ ಮಾಡುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು












Click it and Unblock the Notifications