ತಿರುಪತಿಯಲ್ಲಿ 50 ಕೋಟಿ ರು. ವೆಚ್ಚದಲ್ಲಿ ಕನ್ನಡಿಗರಿಗೆ ಅತಿಥಿ ವಸತಿ
ತಿರುಪತಿಯಲ್ಲಿ 50 ಕೋಟಿ ರು. ವೆಚ್ಚದಲ್ಲಿ ಕನ್ನಡಿಗರಿಗೆ ಅತಿಥಿ ವಸತಿ
ವಸತಿ ಯೋಜನೆಗೆ ದಾನ ಕೊಡಿ, ವರ್ಷಕ್ಕೆ 30 ದಿನ ತಂಗುದಾಣ ಉಚಿತ ಪಡೆಯಿರಿ
ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ (ಆ.25) ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯದ ಯಾತ್ರಾರ್ಥಿಗಳಿಗೆ ಸೌಕರ್ಯ ಹೆಚ್ಚಿಸುವ ಸಲುವಾಗಿ ರಾಜ್ಯ ಸರ್ಕಾರ ದತ್ತಿ (ಟ್ರಸ್ಟ್) ಯಾಂದನ್ನು ಸ್ಥಾಪಿಸಿದೆ. ಈ ದತ್ತಿ ತಿರುಮಲ ಮತ್ತು ತಿರುಪತಿಯಲ್ಲಿ ಅತಿಥಿ ವಸತಿಗಳನ್ನು ಕಟ್ಟಲು ದಾನಿಗಳಿಂದ ದೇಣಿಗೆ ಸಂಗ್ರಹಿಸಲಿದೆ. ಆಸಕ್ತರು ಹಣಕಾಸಿನ ನೆರವು ನೀಡಬಹುದು. ದತ್ತಿಗೆ ಹಣದ ಸಹಾಯ ಮಾಡುವವರಿಗೆ ವರ್ಷಕ್ಕೆ 30 ದಿನ ತಿರುಪತಿಯಲ್ಲಿ ತಂಗುವ ಪುಕ್ಕಟೆ ವ್ಯವಸ್ಥೆಯನ್ನು ಸರ್ಕಾರ ಒದಗಿಸಿಕೊಡಲಿದೆ ಎಂದು ದತ್ತಿಯ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಹೇಳಿದರು.
ತಿರುಪತಿಯಲ್ಲಿ ಕರ್ನಾಟಕ ಕಟ್ಟಿರುವ ಛತ್ರದ ಜಾಗ ತನ್ನದು ಎಂದು ಆಂಧ್ರಪ್ರದೇಶ ಹೇಳುತ್ತಿದೆ. ಆದರೆ, ಆ ಭೂಮಿ ಮೈಸೂರು ಮಹಾರಾಜರು ಕೊಟ್ಟ ಕಾಣಿಕೆ ಎಂಬುದು ಕರ್ನಾಟಕದ ಸಮರ್ಥನೆ. ಈ ವಿವಾದಕ್ಕೆ ಶೀಘ್ರವೇ ಸೂಕ್ತ ಪರಿಹಾರ ಹುಡುಕಲಾಗುವುದು ಎಂದು ಶಿವಕುಮಾರ್ ಪ್ರಶ್ನೆಯಾಂದಕ್ಕೆ ಉತ್ತರಿಸಿದರು.
ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ತಿರುಮಲ ತಿರುಪತಿಯಲ್ಲಿ ಅತಿಥಿ ವಸತಿ ಯೋಜನೆಗೆ ದೇಣಿಗೆ ಕೊಡಲು ಮುಂದಾಗಿದೆ. ಎನ್‌ಆರ್‌ಐಗಳು ಸೇರಿದಂತೆ ಅನೇಕರು ಹಣ ಕೊಡಲು ಸಾಕಷ್ಟು ಸಂಖ್ಯೆಯಲ್ಲಿ ಮುಂದೆ ಬರುತ್ತಿದ್ದಾರೆ ಎಂದ ಶಿವಕುಮಾರ್, ಖುದ್ದು ತಾವು ಹಾಗೂ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ತಲಾ 15 ಸಾವಿರ ರುಪಾಯಿ ದೇಣಿಗೆ ಕೊಟ್ಟಿರುವುದಾಗಿ ತಿಳಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications