ಬೆಂಗಳೂರಲ್ಲಿ ವಾಯುಮಾಲಿನ್ಯನಿಯಂತ್ರಿಸಲು ಕೇಂದ್ರದ ಸೂಚನೆ
ಬೆಂಗಳೂರಲ್ಲಿ ವಾಯುಮಾಲಿನ್ಯನಿಯಂತ್ರಿಸಲು ಕೇಂದ್ರದ ಸೂಚನೆ
ಕೇಂದ್ರ ಕೆರೆ ಸಂರಕ್ಷಣಾ ಯೋಜನೆಯಲ್ಲಿ ಲಾಲ್‌ಬಾಗ್ ಕೆರೆ
ಪರಿಸರ ಹಾಗೂ ಅರಣ್ಯ ಖಾತೆ ಸಚಿವ ಟಿ. ಆರ್. ಬಾಲು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ವಾಯು ಮಾಲಿನ್ಯ ತಡೆಗಟ್ಟಲು ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ. ದೇಶದಲ್ಲಿ ಅತೀ ಹೆಚ್ಚು ವಾಯು ಮಾಲಿನ್ಯದಿಂದ ಬಳಲುತ್ತಿರುವ ಏಳು ನಗರಗಳಲ್ಲಿ ಬೆಂಗಳೂರು ಕೂಡ ಒಂದು ಎಂದು ಇತ್ತೀಚೆಗೆ ಸುಪ್ರಿಂ ಕೋರ್ಟ್ ಗುರುತಿಸಿದೆ ಎಂದು ಬಾಲು ತಮ್ಮ ಕಳವಳ ವ್ಯಕ್ತಪಡಿಸಿದರು.
ರಾಷ್ಟ್ರೀಯ ಕೆರೆ ಸಂರಕ್ಷಣಾ ಯೋಜನೆಯಡಿಯಲ್ಲಿ ಕೇಂದ್ರ ಪರಿಸರ ಇಲಾಖೆಯು ನಗರದ ಲಾಲ್‌ಬಾಗ್ ಕೆರೆಯನ್ನು 2 ಕೋಟಿ ರೂ. ವೆಚ್ಚದಲ್ಲಿ ಹಾಗೂ ಗದಗದ ಭೀಷ್ಮ ಕೆರೆಯನ್ನು 2. 5 ಕೋಟಿ ರೂ. ವೆಚ್ಚದಲ್ಲಿ ರಿಪೇರಿ ಮಾಡಲಿದೆ. ಈಗಾಗಲೇ ಬೆಳ್ಳಂದೂರು ಕೆರೆ ಅಭಿವೃದ್ಧಿಗೆ 5. 5. ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದ ಆರು ಕೆರೆಗಳಿಗೋಸ್ಕರ 12. 32 ಕೋಟಿ ರೂಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಬಾಲು ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications