• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೆಂಗಳೂರು ವಿ.ವಿ. ಪ್ರಾಧ್ಯಾಪಕರಾಗಿ ಮಹಾತ್ಮಗಾಂಧಿ ಮೊಮ್ಮಗ

By Staff
|

ಬೆಂಗಳೂರು ವಿ.ವಿ. ಪ್ರಾಧ್ಯಾಪಕರಾಗಿ ಮಹಾತ್ಮಗಾಂಧಿ ಮೊಮ್ಮಗ

ಎರಡು ವರ್ಷಗಳ ಕಾಲ ಸಂದರ್ಶಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಣೆ

ಬೆಂಗಳೂರು : ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಮೊಮ್ಮಗ ಡಾ. ರಾಮಚಂದ್ರ ಗಾಂಧಿ ಬೆಂಗಳೂರು ವಿಶ್ವ ವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿ ಸೋಮವಾರ (ಸೆ.1) ಕರ್ತವ್ಯಕ್ಕೆ ಹಾಜರಾದರು.

ಪ್ರಸಿದ್ಧ ತತ್ವಶಾಸ್ತ್ರಜ್ಞರೆಂದು ಹೆಸರು ಪಡೆದಿರುವ ಡಾ.ರಾಮಚಂದ್ರ ಗಾಂಧಿ ಅವರು ಎರಡು ವರ್ಷಗಳ ಕಾಲ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುವರು. ದೆಹಲಿ ಹಾಗೂ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯಗಳಿಂದ ಡಾಕ್ಟರೇಟ್‌ ಪದವಿ ಪಡೆದಿರುವ ರಾಮಚಂದ್ರ ಗಾಂಧಿ- ಬ್ರಿಟನ್‌, ಅಮೆರಿಕ ಹಾಗೂ ಭಾರತದ ವಿವಿಧ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಪಾಠ ಹೇಳಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ರಾಮಚಂದ್ರ ಗಾಂಧಿ ಅವರು ತತ್ವಶಾಸ್ತ್ರ ಮಾತ್ರವಲ್ಲದೆ- ಗಾಂಧಿ ಅಧ್ಯಯನ, ಯೋಗ, ವಿಜ್ಞಾನ, ಅಂಬೇಡ್ಕರ್‌ ಕೇಂದ್ರ, ಮನಃಶಾಸ್ತ್ರ ಇತ್ಯಾದಿ ಚಟುವಟಿಕೆಗಳಲ್ಲಿ ಭಾಗವಹಿಸುವರು. ಜ್ಞಾನಭಾರತಿ ಹಾಗೂ ಬೆಂಗಳೂರಿನ ವಿವಿಧ ಶಾಲೆಗಳಲ್ಲಿ ಡಾ.ರಾಮಚಂದ್ರ ಗಾಂಧಿ ಪ್ರವಚನ ನೀಡುವರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more