• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯೋತ್ಸವ ಪ್ರಶಸ್ತಿ ಬಯಸಿ ಬಂದಿರುವ ಅರ್ಜಿಗಳ ಸಂಖ್ಯೆ 1085

By Staff
|

ರಾಜ್ಯೋತ್ಸವ ಪ್ರಶಸ್ತಿ ಬಯಸಿ ಬಂದಿರುವ ಅರ್ಜಿಗಳ ಸಂಖ್ಯೆ 1085

ಪ್ರಶಸ್ತಿಯ ಆಯ್ಕೆ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ

ಬೆಂಗಳೂರು : ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಮಂಗಳವಾರ (ಸೆ.16) ಆಯ್ಕೆ ಸಮಿತಿಯ ಸಭೆ ನಡೆಯಿತು.

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ರಾಣಿ ಸತೀಶ್‌ ನೇತೃತ್ವದಲ್ಲಿ ಒಂದು ಸಮಿತಿ ರಚಿತವಾಗಿದ್ದು, ಮಂಗಳವಾರ ಸಮಿತಿ ಸಭೆ ನಡೆಸಿತು. ಅಕ್ಟೋಬರ್‌ 3ನೇ ವಾರದ ಹೊತ್ತಿಗೆ ರಾಜ್ಯೋತ್ಸವ ಪ್ರಶಸ್ತಿ ಯಾರ್ಯಾರಿಗೆ ಕೊಡಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರ ಹೊರ ಬರುವ ನಿರೀಕ್ಷೆಯಿದೆ.

ಸಂಸ್ಕೃತಿ ಇಲಾಖೆ ಕಚೇರಿ ಮೂಲಗಳ ಪ್ರಕಾರ ಕಳೆದ ವರ್ಷ ರಾಜ್ಯೋತ್ಸವ ಪ್ರಶಸ್ತಿಗಾಗಿ 700 ಅರ್ಜಿಗಳು ಬಂದಿದ್ದವು. ಈ ವರ್ಷ 1085 ಅರ್ಜಿಗಳು ರಾಣಿ ಸತೀಶ್‌ ಅವರ ಕೈಯಲ್ಲಿವೆ. ವಯಸ್ಸು, ಸಾಧನೆಯೇ ಪ್ರಶಸ್ತಿ ಆಯ್ಕೆಯ ಪ್ರಮುಖ ಮಾನದಂಡ. ಯಾವುದೇ ರಾಜಕಾರಣಕ್ಕೆ ಇಲ್ಲಿ ಅವಕಾಶವಿಲ್ಲ ಎಂದು ರಾಣಿ ಸತೀಶ್‌ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಪ್ರಶಸ್ತಿಗೆ ಬಂದಿರುವ ಅರ್ಜಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಹೆಚ್ಚು ಜನರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಕೊಡುವಿರಾ ಎಂಬ ಪ್ರಶ್ನೆಗೆ, ಪ್ರಶಸ್ತಿ ಸಂಖ್ಯೆಯನ್ನು ಏರಿಸಲಾಗದು. 55 ಮಂದಿ ಅರ್ಹರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಬಯಸಿ ಬಂದಿರುವ ಅರ್ಜಿಗಳನ್ನು ಪರಿಶೀಲಿಸಲು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದಲ್ಲಿ ವಿಶೇಷ ಸಾಫ್ಟ್‌ವೇರ್‌ ಒಂದನ್ನು ಬಳಸಲಾಗುತ್ತಿದೆ. ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ಅಕಾಡೆಮಿಗಳನ್ನು ಅರ್ಜಿದಾರರ ಸಾಧನೆ ಬಗ್ಗೆ ಕೇಳಿ, ಖಚಿತಪಡಿಸಿಕೊಳ್ಳುತ್ತೇವೆ ಎಂದು ರಾಣಿ ಸತೀಶ್‌ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more