ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿನೌಕರರಿಗಿದು ಒಳ್ಳೆಯ ಕಾಲವಲ್ಲ ! 1000 ಹುದ್ದೆಗಳು ರದ್ದು !

By Staff
|
Google Oneindia Kannada News

ಸರ್ಕಾರಿನೌಕರರಿಗಿದು ಒಳ್ಳೆಯ ಕಾಲವಲ್ಲ ! 1000 ಹುದ್ದೆಗಳು ರದ್ದು !
ನೌಕರರ ಸಂಖ್ಯೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಕಾರ್ಯತಂತ್ರ

ಬೆಂಗಳೂರು : ಸರ್ಕಾರಿ ನೌಕರರ ಸಂಖ್ಯೆಯನ್ನು ಕಡಿತಗೊಳಿಸುವ ತನ್ನ ಕಾರ್ಯತಂತ್ರದ ಅಂಗವಾಗಿ 1 ಸಾವಿರ ಸರ್ಕಾರಿ ಹುದ್ದೆಗಳನ್ನು ವಿಭಾಗೀಯ ಮಟ್ಟದಲ್ಲಿ ರದ್ದುಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಉದ್ಯೋಗಗಳ ಕಡಿತ ಸುಮಾರು 22 ಇಲಾಖೆಗಳಲ್ಲಿ ನಡೆಯಲಿದೆ. ಆಡಳಿತ ಉತ್ತಮೀಕರಣ ಆಯೋಗದ ಶಿಫಾರಸ್ಸಿನಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಉನ್ನತ ದರ್ಜೆಯ ಹುದ್ದೆಗಳಿಗೆ ಸಂಬಂಧಿಸಿದಂತೆ ಈ ಕಡಿತ ನಡೆಯಲಿದೆ ಎಂದು ಶಿಕ್ಷಣ ಸಚಿವ ಬಿ.ಕೆ.ಚಂದ್ರಶೇಖರ್‌ ಸೆ.18ರ ಗುರುವಾರ ಸುದ್ದಿಗಾರರಿಗೆ ತಿಳಿಸಿದರು. ಗುರುವಾರ ನಡೆದ ಸಂಪುಟ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಲೇಜು ಶಿಕ್ಷಣ ವಿಭಾಗವನ್ನು ರದ್ದುಪಡಿಸುವ ಅಥವಾ ಮುಂದುವರಿಸುವ ಕುರಿತೂ ಸರ್ಕಾರ ಚಿಂತಿಸುತ್ತಿದೆ ಎಂದು ಸಚಿವ ಚಂದ್ರಶೇಖರ್‌ ಹೇಳಿದರು. ರೈತರ ನೆರವಿಗೆ ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿರುವ 880 ಕೋಟಿ ರುಪಾಯಿಗಳ ವಿಶೇಷ ಪ್ಯಾಕೇಜನ್ನು ಜಾರಿಗೊಳಿಸಲಾಗಿದೆ ಎಂದು ಚಂದ್ರಶೇಖರ್‌ ಹೇಳಿದರು.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X