ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪುಸ್ತಕ ಖರೀದಿ : ಅರ್ಜಿ ಆಹ್ವಾನ

By Staff
|
Google Oneindia Kannada News

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪುಸ್ತಕ ಖರೀದಿ : ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವಂಬರ್‌ 30, 2003

ಬೆಂಗಳೂರು : 2002ನೇ ಇಸವಿಯಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟಗೊಂಡ ಕನ್ನಡ ಪುಸ್ತಕಗಳನ್ನು ಖರೀದಿಸಲು ಕನ್ನಡ ಪುಸ್ತಕ ಪ್ರಾಧಿಕಾರ ಅರ್ಜಿಗಳನ್ನು ಆಹ್ವಾನಿಸಿದೆ.

ಕನ್ನಡ ಪುಸ್ತಕಗಳನ್ನು ಸಗಟು ಪುಸ್ತಕ ಖರೀದಿ ಯೋಜನೆಯಡಿಯಲ್ಲಿ ಪ್ರಾಧಿಕಾರ ಖರೀದಿಸಲಿದೆ. ಅರ್ಜಿಗಳನ್ನು ಉಚಿತವಾಗಿ ಪಡೆಯಬಹುದಾಗಿದ್ದು , ಲೇಖಕರು ಹಾಗೂ ಪ್ರಕಾಶಕರು ಅರ್ಜಿಯಾಂದಿಗೆ ಎರಡು ಕೃತಿಗಳನ್ನು ಪ್ರಾಧಿಕಾರಕ್ಕೆ ಕಳುಹಿಸಿಕೊಡಬೇಕು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಆಸಕ್ತ ಲೇಖಕರು ಹಾಗೂ ಪ್ರಕಾಶಕರು ಕೆಳಗಿನ ಅಂಶಗಳನ್ನು ಗಮನಿಸಿ :

  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಬೆಂಗಳೂರು ಅಥವಾ ಕನ್ನಡ ಪುಸ್ತಕ ಅಭಿವೃದ್ಧಿ ಪ್ರಾಧಿಕಾರ, ಚಾಮರಾಜಪೇಟೆ, ಪಂಪ ಮಹಾಕವಿ ರಸ್ತೆ , ಬೆಂಗಳೂರು- ಈ ವಿಳಾಸಗಳಲ್ಲಿ ಅರ್ಜಿ ನಮೂನೆ ಪಡೆಯಬಹುದು.
  • ಜಿಲ್ಲಾ ಕೇಂದ್ರಗಳಲ್ಲಿ , ಆಯಾ ಜಿಲ್ಲಾ ಕೇಂದ್ರ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಅರ್ಜಿ ಪಡೆಯಬಹುದು.
  • ಅರ್ಜಿ ಸಲ್ಲಿಸಲು ಕೊನೆಯ ದಿನ ನವಂಬರ್‌ 30, 2003.
(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X