ಹೈ.ಕ.ಕನ್ನಡಿಗರಿಗೆ ‘ಪ್ರತ್ಯೇಕ ರಾಜ್ಯದಿನ’ವಾಗಲಿರುವ ರಾಜ್ಯೋತ್ಸವ
ಹೈ.ಕ.ಕನ್ನಡಿಗರಿಗೆ ‘ಪ್ರತ್ಯೇಕ ರಾಜ್ಯದಿನ’ವಾಗಲಿರುವ ರಾಜ್ಯೋತ್ಸವ
ಸರಕಾರದ ನಿರ್ಲಕ್ಷ್ಯ ವಿರೋಧಿಸಿ ಉತ್ತರ ಕರ್ನಾಟಕದಲ್ಲಿ ಪ್ರತಿಭಟನೆ
ಪ್ರತ್ಯೇಕ ರಾಜ್ಯ ದಿನದಂದು ಹೈದರಾಬಾದ್ ಕರ್ನಾಟಕ ರಾಜ್ಯ ಧ್ವಜವನ್ನು ಹಾರಿಸಿ ರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸುತ್ತ ಬರಲಾಗಿದೆ. ಇಂದಿಗೂ ಉತ್ತರ ಕರ್ನಾಟಕ ಅಭಿವೃದ್ಧಿಗೆ ರಾಜ್ಯ ಗಮನ ಹರಿಸುತ್ತಿಲ್ಲ. ಆದ್ದರಿಂದ ಗುಲ್ಬರ್ಗ, ರಾಯಚೂರು, ಕೊಪ್ಪಳ, ಬೀದರ ಜಿಲ್ಲೆಗಳಲ್ಲಿ ರಾಜ್ಯೋತ್ಸವ ದಿನವನ್ನು ಪ್ರತಿಭಟನಾ ದಿನವನ್ನಾಗಿ ಆಚರಿಸಲಾಗುವುದು ಎಂದು ಪಾಟೀಲ್ ಹೇಳಿದರು.
ಉತ್ತರ ಕರ್ನಾಟಕಕ್ಕೆ ವಿಶೇಷ ಸೌಲಭ್ಯ ಕಲ್ಪಿಸುವ ಸಂವಿಧಾನದ 371ನೇ ವಿಧಿಯ ತಿದ್ದುಪಡಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದರೂ, ಸರಕಾರ ಉತ್ತರ ಕರ್ನಾಟಕದತ್ತ ಯಾಕೆ ನಿರ್ಲಕ್ಷ್ಯ ಮನೋಭಾವ ತೋರುತ್ತಿದೆ ಎಂಬುದು ತಿಳಿಯುತ್ತಿಲ್ಲ ಎಂದ ಪಾಟೀಲ್ ಈ ಕುರಿತು ಉಗ್ರ ಹೋರಾಟ ನಡೆಸಲಾಗುವುದು ಎಂದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications