ರಾಜ್ಯದ ಎಲ್ಲಾ ರಾಷ್ಟ್ರೀಯ ಉದ್ಯಾನಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷಿದ್ಧ

ರಾಜ್ಯದ ಎಲ್ಲಾ ರಾಷ್ಟ್ರೀಯ ಉದ್ಯಾನಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷಿದ್ಧ
ಪ್ಲಾಸ್ಟಿಕ್‌ ನಿಷೇಧ ಜಾರಿಗೆ ಹಂತಹಂತವಾಗಿ ಯತ್ನ

ಬೆಂಗಳೂರು : ಕರ್ನಾಟಕದಲ್ಲಿರುವ ರಾಷ್ಟ್ರೀಯ ಉದ್ಯಾನಗಳಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ ಹೆಚ್ಚಾಗುತ್ತಿರುವುದು ದೊಡ್ಡ ತಲೆನೋವಾಗಿರುವುದರಿಂದ ಇನ್ನು ಮುಂದೆ ಈ ಉದ್ಯಾನವನಗಳಲ್ಲಿ ಎಲ್ಲ ರೀತಿಯ ಪ್ಲಾಸ್ಟಿಕ್‌ ಬಳಕೆಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ.

ಕಳೆದ ವರ್ಷ ನಗರದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್‌ ತಿಂದು 18 ಜಿಂಕೆಗಳು ಸತ್ತ ಹಿನ್ನೆಲೆಯಲ್ಲಿ ಅಲ್ಲಿ ಮಾತ್ರ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಲಾಗಿತ್ತು. ಇತರೆ ರಾಷ್ಟ್ರೀಯ ಉದ್ಯಾನಗಳಲ್ಲೂ ಇದೇ ಪರಿಸ್ಥಿತಿಯಿದ್ದು, ಪ್ಲಾಸ್ಟಿಕ್‌ ತ್ಯಾಜ್ಯದಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುವ ಅಪಾಯವಿರುವ ಕಾರಣ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಹಿರಿಯ ಅರಣ್ಯ ಸಂರಕ್ಷಣಾಧಿಕಾರಿ ಐ.ಎಂ.ರೈ ಪ್ಲಾಸ್ಟಿಕ್‌ ನಿಷೇಧದ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದರು. ರಾಷ್ಟ್ರೀಯ ಉದ್ಯಾನವನಗಳಿಗೆ ಬರುವ ಮಂದಿ ಪಿಕ್‌ನಿಕ್‌ ದೃಷ್ಟಿಯಲ್ಲೇ ಬರುವ ಪ್ರವಾಸಿಗರಾಗಿರುತ್ತಾರೆ. ಹೀಗಾಗಿ ಚೀಲ, ಲೋಟ- ತಟ್ಟೆ, ಕೊನೆಗೆ ಚಮಚದವರೆಗೆ ಎಲ್ಲಾ ಪ್ಲಾಸ್ಟಿಕ್‌ ಪದಾರ್ಥಗಳನ್ನು ತಂದು, ಉಪಯೋಗಿಸಿ ಬಿಸಾಡುವವರೇ ಹೆಚ್ಚು. ಹೀಗೆ ಸಂಗ್ರಹವಾಗುವ ಪ್ಲಾಸ್ಟಿಕ್‌ ತ್ಯಾಜ್ಯ ಜೈವಿಕ ಗೊಬ್ಬರವಾಗುವುದಿಲ್ಲ. ಬದಲಿಗೆ ಮಣ್ಣಿನೊಳಗೆ ಸೇರುವ ವಿಷವಾಗುತ್ತದೆ. ಈ ತ್ಯಾಜ್ಯದ ವಿಲೇವಾರಿಯೂ ಸುಲಭದ ಕೆಲಸವಲ್ಲ ಎಂದು ರೈ ಹೇಳಿದರು.

ಪ್ಲಾಸ್ಟಿಕ್‌ ನಿಷೇಧವನ್ನು ಏಕಾಏಕಿ ಅನುಷ್ಠಾನಕ್ಕೆ ತರುವುದು ಸುಲಭದ ಮಾತಲ್ಲ. ಇದನ್ನು ಹಂತಹಂತವಾಗಿ ಜಾರಿಗೆ ತರುವ ಹಾದಿಯಲ್ಲಿ ನಾವಿದ್ದೇವೆ. ಈಗಾಗಲೇ ರಾಷ್ಟ್ರೀಯ ಉದ್ಯಾನಗಳ ಅಧಿಕಾರಿಗಳಿಗೆ ಪ್ಲಾಸ್ಟಿಕ್‌ ನಿಷೇಧಿಸಿ ಎಂದು ಸುತ್ತೋಲೆ ಹೊರಡಿಸಲಾಗಿದೆ. ಮೊದಲು ಪ್ರವಾಸಿಗರಿಗೆ ಪ್ಲಾಸ್ಟಿಕ್‌ ಬಳಸುವುದರಿಂದ ಆಯಾ ಪರಿಸರದಲ್ಲಿ ಆಗುತ್ತಿರುವ ಅಪಾಯಗಳನ್ನು ಮನವರಿಕೆ ಮಾಡಿಸಲು ತೀರ್ಮಾನಿಸಲಾಗಿದೆ. ಹಾಗೆ ತಿಳಿಸಿ ಹೇಳಿದ ನಂತರವೂ ಜನ ಪ್ಲಾಸ್ಟಿಕ್‌ ಬಳಕೆ ನಿಲ್ಲಿಸದೆ ಇದ್ದಲ್ಲಿ ದಂಡ ವಿಧಿಸುವ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.

(ಇನ್ಫೋ ವಾರ್ತೆ)

Post your views

ಮುಖಪುಟ / ವಾರ್ತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+