Get Updates
Get notified of breaking news, exclusive insights, and must-see stories!

ಸಾಹಿತ್ಯ ಸಮ್ಮೇಳನಾಧ್ಯಕ್ಷತೆಯಲ್ಲಿ ನನಗೆ ಆಸಕ್ತಿ ಇಲ್ಲ -ಚಿಮೂ

ಸಾಹಿತ್ಯ ಸಮ್ಮೇಳನಾಧ್ಯಕ್ಷತೆಯಲ್ಲಿ ನನಗೆ ಆಸಕ್ತಿ ಇಲ್ಲ -ಚಿಮೂ
ನ.12ರ ಬುಧವಾರ ಮೂಡಬಿದರೆ ಸಮ್ಮೇಳನಾಧ್ಯಕ್ಷರ ಆಯ್ಕೆ

ಬೆಂಗಳೂರು : ಸಾಹಿತ್ಯ ಸಮ್ಮೇಳನಾಧ್ಯಕ್ಷರ ಪಟ್ಟವೇರಲು ತಮಗೆ ಆಸಕ್ತಿ ಇಲ್ಲ ಎಂದು ಹಿರಿಯ ಸಂಶೋಧಕ ಡಾ. ಎಂ. ಚಿದಾನಂದ ಮೂರ್ತಿ ಹೇಳಿದ್ದಾರೆ.

ಸಮ್ಮೇಳನಾಧ್ಯಕ್ಷರ ಸ್ಥಾನವನ್ನು ತಿರಸ್ಕರಿಸಿರುವುದರ ಹಿಂದಿರುವ ಕಾರಣವನ್ನು ಚಿಮೂ ಸ್ಪಷ್ಟ ಪಡಿಸಿಲ್ಲ. ತಮ್ಮ ಅಭಿಪ್ರಾಯವನ್ನು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಿಗೆ ತಿಳಿಸಿರುವ ಚಿದಾನಂದಮೂರ್ತಿ- ಇದು ತಮ್ಮ ವೈಯಕ್ತಿ ಕ ಅಭಿಪ್ರಾಯ ಎಂದಿದ್ದಾರೆ.

ನ.8ರ ಶನಿವಾರ ಚಿತ್ರದುರ್ಗದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷರ ಸಭೆ ಮೂಡಬಿದರೆ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕಾಗಿ ಚಿದಾನಂದಮೂರ್ತಿ ಹಾಗೂ ಕಮಲಾ ಹಂಪಾನಾ ಅವರ ಹೆಸರನ್ನು ಪ್ರಮುಖವಾಗಿ ಚರ್ಚಿಸಿತ್ತು . ಈ ಹಿನ್ನೆಲೆಯಲ್ಲಿ ತಮಗೆ ಸಮ್ಮೇಳನದ ಅಧ್ಯಕ್ಷ ಸ್ಥಾನದಲ್ಲಿ ಆಸಕ್ತಿಯಿಲ್ಲ ಎಂದು ಚಿಮೂ ಸ್ಪಷ್ಟಪಡಿಸಿದ್ದಾರೆ.

ಸಮ್ಮೇಳನಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗಾಗಿ ಬೆಂಗಳೂರಿನಲ್ಲಿ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳ ಸಭೆ ನವೆಂಬರ್‌ 12ರ ಬುಧವಾರ ಮತ್ತೊಮ್ಮೆ ಸಭೆ ಸೇರಲಿದೆ.

ಅಧ್ಯಕ್ಷ ಸ್ಥಾನಕ್ಕೆ ಸಂಭಾವ್ಯರ ಪಟ್ಟಿಯಲ್ಲಿರುವ ಇತರ ಹೆಸರುಗಳು: ಪ್ರೊ. ಜಿ.ವೆಂಕಟ ಸುಬ್ಬಯ್ಯ, ಪ್ರೊ. ಎಲ್‌. ಎಸ್‌. ಶೇಷಗಿರಿ ರಾವ್‌ ಹಾಗೂ ಎಸ್‌. ಕೆ. ರಾಮಚಂದ್ರರಾವ್‌.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+