ದತ್ತಪೀಠ ಚರ್ಚೆಗೆ ಬನ್ನಿ -ಕಾರ್ನಾಡ್ಗೆ ಭಜರಂಗದಳದ ಆಹ್ವಾನ
ದತ್ತಪೀಠ ಚರ್ಚೆಗೆ ಬನ್ನಿ -ಕಾರ್ನಾಡ್ಗೆ ಭಜರಂಗದಳದ ಆಹ್ವಾನ
ವಸ್ತುಸ್ಥಿತಿ ಅರಿಯದ ಸಾಹಿತಿಗಳು ಹೇಳಿಕೆಗಳನ್ನು ನೀಡುವುದನ್ನು ಬಿಡಲಿ...
ಕೋಮು ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ದತ್ತಜಯಂತಿ ಆಚರಣೆ ಸಂದರ್ಭದಲ್ಲಿ ಶೋಭಾಯಾತ್ರೆಗಳನ್ನು ಸರ್ಕಾರ ನಿಷೇಧಿಸಿದೆ. ಈ ಬಗ್ಗೆ ಬಹಿರಂಗ ಚರ್ಚೆ ನಡೆಸಲು ಭಜರಂಗ ದಳ ನಿರ್ಧರಿಸಿದೆ ಎಂದು ದಳದ ಸಂಯೋಜಕ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಈ ಬಹಿರಂಗ ಚರ್ಚೆಯಿಂದ ದತ್ತ ಪೀಠದ ಸುತ್ತ ಇರುವ ವಾಸ್ತವ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವುದು ಸಾಧ್ಯವಾಗುತ್ತದೆ. ವಾಸ್ತವವನ್ನು ಅರಿಯದೆಯೇ ಕಾರ್ನಾಡ್ರಂತಹ ಜ್ಞಾನಪೀಠ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿಗಳು ಯಾವುದೇ ಹೇಳಿಕೆಗಳನ್ನು ಕೊಡಬಾರದು ಎಂದು ಸುನೀಲ್ ಕುಮಾರ್ ಹೇಳಿದರು.
ದತ್ತಪೀಠ ಸಮಸ್ಯೆಯ ಬಗ್ಗೆ ಭಜರಂಗ ದಳವು ಸೂಕ್ತ ದಾಖಲೆಪತ್ರಗಳನ್ನು ಹೊಂದಿದೆ. ಇವುಗಳ ಆಧಾರದ ಮೇಲೆ ಭಜರಂಗದಳವು ನ್ಯಾಯಕ್ಕಾಗಿ ಹೋರಾಟ ನಡೆಸುತ್ತದೆ. ವಿಚಾರವಾದಿಗಳು ಹಾಗೂ ಸಾಹಿತಿಗಳೂ ಕೂಡ ಅವರ ಬಳಿ ಇರುವ ದಾಖಲೆ ಪತ್ರಗಳ ಸಹಾಯದಿಂದ ದತ್ತ ಪೀಠದ ನೈಜತೆಯನ್ನು ಹೊರ ಹಾಕಲು ಹೋರಾಟ ನಡೆಸಲಿ ಎಂದು ಸುನೀಲ್ ಕುಮಾರ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications