ಬಳ್ಳಾರಿ-ಕೊಪ್ಪಳ ಜಿಲ್ಲೆಗಳಲ್ಲಿ ಮೆದುಳು ಜ್ವರ ; 6 ಮಂದಿ ಸಾವು
ಬಳ್ಳಾರಿ-ಕೊಪ್ಪಳ ಜಿಲ್ಲೆಗಳಲ್ಲಿ ಮೆದುಳು ಜ್ವರ ; 6 ಮಂದಿ ಸಾವು
ಸ್ವಚ್ಛತೆ ಹಾಗೂ ರೋಗ ಲಕ್ಷಣಗಳ ಕುರಿತು ವ್ಯಾಪಕ ತಿಳಿವಳಿಕೆ ಕಾರ್ಯಕ್ರಮ
42 ಮಕ್ಕಳಿಗೆ ಮೆದುಳು ಜ್ವರ ತಗುಲಿದ್ದು , ಜ್ವರಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಇದೇ ವೇಳೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಜ್ವರ ಪೀಡಿತ ಪ್ರದೇಶಗಳಲ್ಲಿ ವ್ಯಾಪಕ ಸಂಚಾರ ನಡೆಸಿ ಜ್ವರದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.
ಈವರೆಗೂ ಬಳ್ಳಾರಿ ಜಿಲ್ಲೆಯಲ್ಲಿ ಮೆದುಳು ಜ್ವರದ 25 ಪ್ರಕರಣಗಳು ಪತ್ತೆಯಾಗಿವೆ. ಅವರಲ್ಲಿ ನಾಲ್ವರು ಮಕ್ಕಳು ಮೃತರಾಗಿದ್ದಾರೆ ಎಂದು ಆರೋಗ್ಯಾಧಿಕಾರಿ ಡಾ.ಜಯಕುಮಾರ್ ತಿಳಿಸಿದ್ದಾರೆ.
ಹಳ್ಳಿಗಳಲ್ಲಿ ರೋಗ ಲಕ್ಷಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ವೈದ್ಯಕೀಯ ಇಲಾಖೆ ಪ್ರಚಾರ ನಡೆಸುತ್ತಿದೆ. ಜನರು ಸ್ವಚ್ಛತೆಯ ಕುರಿತು ಅನುಸರಿಸಬೇಕಾದ ಕ್ರಮಗಳ ಕುರಿತೂ ಜನರಿಗೆ ತಿಳಿವಳಿಕೆ ನೀಡಲಾಗುತ್ತಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications