ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬುಡಕಟ್ಟು ಜನರಿಗೆ ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಿಗೆ ಟೆಲಿ ಔಷಧಿ ವ್ಯವಸ್ಥೆ

By Staff
|
Google Oneindia Kannada News

ಬುಡಕಟ್ಟು ಜನರಿಗೆ ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಿಗೆ ಟೆಲಿ ಔಷಧಿ ವ್ಯವಸ್ಥೆ
ಬೆಂಗಳೂರು- ಮದ್ದೂರು ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಮದ್ದೂರು : ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಟೆಲಿ ಮೆಡಿಸಿನ್‌ ವ್ಯವಸ್ಥೆ , ಹೆರಿಗೆ ಆಸ್ಪತ್ರೆಗಳಲ್ಲಿ ಆಧುನಿಕ ಸೌಲಭ್ಯಗಳನ್ನು ಆದಷ್ಟು ಬೇಗ ಅಳವಡಿಸುವುದಾಗಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಸೋಮವಾರ (ಡಿ. 15) ಹೇಳಿದರು.

ಭಗವಾನ್‌ ಮಹಾವೀರ ಜೈನ್‌ ಟ್ರಸ್ಟ್‌ ಆಶ್ರಯದಲ್ಲಿ ಪ್ರಾರಂಭವಾದ ಎರಡು ದಿನಗಳ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತಾಡುತ್ತಿದ್ದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಟೆಲಿ ಮೆಡಿಸಿನ್‌ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಲಾಗಿದ್ದು, ಮೊದಲ ಹಂತವಾಗಿ ಹೃದ್ರೋಗ ಸಂಬಂಧಿ ಕಾಯಿಲೆಗಳಿಗೆ ಮದ್ದು ನೀಡುವ ಹಾದಿಯಲ್ಲಿ ಆಯ್ದ ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗುವುದು ಎಂದರು.

ಸರ್ಕಾರಿ ಆಸ್ಪತ್ರೆಗಳು ಇಲ್ಲದ ಜಾಗೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಎಲ್ಲರಿಗೂ ಆರೋಗ್ಯ ಸೌಲಭ್ಯ ಒದಗಿಸಲಾಗುವುದು. ವಿಶೇಷವಾಗಿ ಅರಣ್ಯ ಪ್ರದೇಶಗಳಲ್ಲಿನ ಬುಡಕಟ್ಟು ಜನಾಂಗದವರ ನೆರವಿಗೆ ಅಲ್ಲಲ್ಲಿ ಆಸ್ಪತ್ರೆಗಳನ್ನು ತೆರೆಯಲಾಗುವುದು ಎಂದು ಹೇಳಿದರು.

ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ರಾಜ್ಯದಲ್ಲಿ ಸಾಕಷ್ಟು ಯಶಸ್ವಿಯಾಗಿದೆ. ಯೋಜನೆಯಿಂದ 7 ಕೋಟಿ ರುಪಾಯಿ ಹಣ ಸಂಗ್ರಹವಾಗಿದ್ದು, ಸರ್ಕಾರ 4.5 ಕೋಟಿ ರುಪಾಯಿ ಹಾಕಿದೆ. ಒಟ್ಟು 2500 ರೈತರು ಈವರೆಗೆ ಯೋಜನೆಯ ಲಾಭ ಪಡೆದು, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಇದು ಬಡವರ ಆರೋಗ್ಯ ಸುಧಾರಣೆಗೆ ಸಾಕಷ್ಟು ನೆರವಾಗಿದೆ ಎಂದರು.

ಚತುಷ್ಪಥ ಕಾಮಗಾರಿಗೆ ಚಾಲನೆ : ಬೆಂಗಳೂರು- ಮೈಸೂರು ನಡುವಿನ ಚತುಷ್ಪಥ ರಸ್ತೆ ಕಾಮಗಾರಿಯ ಮೊದಲ ಹಂತದ ಕೆಲಸಕ್ಕೆ ಕೃಷ್ಣ ಸೋಮವಾರ ಚಾಲನೆ ನೀಡಿದರು. ಬೆಂಗಳೂರು- ಮದ್ದೂರು ನಡುವೆ 88 ಕಿ.ಮೀ. ಉದ್ದದ ಚತುಷ್ಪಥ ರಸ್ತೆ ಇನ್ನೆರಡು ವರ್ಷಗಳಲ್ಲಿ ನಿರ್ಮಾಣವಾಗಲಿದೆ. ಮದ್ದೂರು ಕ್ರೀಡಾಂಗಣದಲ್ಲಿ ಸಾರ್ವಜನಿಕ ನಡೆದ ಸಮಾರಂಭದಲ್ಲಿ ಯೋಜನೆಯ ಕಾಮಗಾರಿಗೆ ಚಾಲನೆ ಕೊಡಲಾಯಿತು.

(ಇನ್ಫೋ ವಾರ್ತೆ)

ಮುಖಪುಟ / ಕೃಷ್ಣಗಾರುಡಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X