ಬೆಂಗಳೂರಲ್ಲಿ ರಸ್ತೆ ಅಪಘಾತದಲ್ಲಿ ಪ್ರತಿವರ್ಷ 800 ಜನರ ಬಲಿ

ಬೆಂಗಳೂರಲ್ಲಿ ರಸ್ತೆ ಅಪಘಾತದಲ್ಲಿ ಪ್ರತಿವರ್ಷ 800 ಜನರ ಬಲಿ
ಟ್ರಾಫಿಕ್‌ ಪೊಲೀಸ್‌ ಇಲಾಖೆಯಿಂದ 15ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗುವವರ ಸಂಖ್ಯೆ ಎಷ್ಟು ಗೊತ್ತಾ ?
  • ಪ್ರತಿ ವರ್ಷ ರಸ್ತೆ ಅಪಘಾತಕ್ಕೆ 800 ಮಂದಿ ಬಲಿ.
  • 7 ಸಾವಿರದಿಂದ 8 ಸಾವಿರ ಮಂದಿಗೆ ಗಾಯ.
15ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸುತ್ತಿರುವ ಸಂದರ್ಭದಲ್ಲಿ , ಬೆಂಗಳೂರಿನ ಟ್ರಾಫಿಕ್‌ ಪೊಲೀಸರು ಈ ಅಂಕಿಅಂಶ ಬಿಡುಗಡೆ ಮಾಡಿದ್ದಾರೆ. ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಜನರಲ್ಲಿ ಅರಿವೇ ಇಲ್ಲ . ಈ ಕಾರಣದಿಂದಾಗಿಯೇ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಸಾವುನೋವುಗಳ ಸಂಖ್ಯೆಯೂ ಹೆಚ್ಚುತ್ತಿದೆ ಎನ್ನುತ್ತಾರೆ ಪೊಲೀಸ್‌ ಅಧಿಕಾರಿಗಳು.

ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಟ್ರಾಫಿಕ್‌ ಪೊಲೀಸರೊಂದಿಗೆ ವಿದ್ಯಾರ್ಥಿಗಳೂ ಕೈಜೋಡಿಸಿದ್ದಾರೆ. ಜ.5ರ ಸೋಮವಾರ ಸುಮಾರು 100 ಶಾಲೆಗಳ 8ರಿಂದ 10 ಸಾವಿರ ವಿದ್ಯಾರ್ಥಿಗಳು ರ್ಯಾಲಿ ನಡೆಸಿದರು. ಮೂರು ಗುಂಪುಗಳಲ್ಲಿ ಹೊರಟ ಈ ರ್ಯಾಲಿಯ ಉದ್ದೇಶ ಜನರಲ್ಲಿ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವುದು.

ರಸ್ತೆ ಸುರಕ್ಷತಾ ಸಪ್ತಾಹದ ಕುರಿತು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಭಾಷಣ, ರಸಪ್ರಶ್ನೆ ಸ್ಪರ್ಧೆ ಮುಂತಾದ ಕಾರ್ಯಕ್ರಮಗಳನ್ನೂ ಪೊಲೀಸ್‌ ಇಲಾಖೆ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಮೂಡವ ಅರಿವು ಅವರ ಅಪ್ಪಅಮ್ಮಂದಿರಿಗೂ ಮುಟ್ಟುತ್ತದೆ ಎನ್ನುವುದು ಇಖೆಯ ಲೆಕ್ಕಾಚಾರವಿರಬಹುದು ?

(ಇನ್ಫೋ ವಾರ್ತೆ)

Post your views

ಮುಖಪುಟ / ಬೆಂಗಳೂರು ಡೈರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+