ಮಿಷನ್ 2004 : ಲೋಕಸಭೆಯಲ್ಲಿ ಸ್ಪಷ್ಟ ಬಹುಮತಕ್ಕೆ ಬಿಜೆಪಿ ಸಂಕಲ್ಪ
ಮಿಷನ್ 2004 : ಲೋಕಸಭೆಯಲ್ಲಿ ಸ್ಪಷ್ಟ ಬಹುಮತಕ್ಕೆ ಬಿಜೆಪಿ ಸಂಕಲ್ಪ
ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಭಾರತೀಯ ಜನತಾಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸೋಮವಾರ (ಜ.12) ಹೈದರಾಬಾದ್‌ನಲ್ಲಿ ಪ್ರಾರಂಭವಾಗಿದ್ದು , ಈ ಕಾರ್ಯಕಾರಿಣಿ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷವು ಮಹತ್ವದ ರಾಜಕೀಯ ನಿರ್ಣಯಗಳನ್ನು ಕೈಗೊಳ್ಳಲಿದೆ.
ಲೋಕಸಭೆ ಚುನಾವಣೆಯಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಪಡೆಯುವುದು ಪಕ್ಷದ 2004ನೇ ಇಸವಿಯ ಗುರಿಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜ.11ರ ಭಾನುವಾರ ಚೆನ್ನೈನಲ್ಲಿ ಮಾತನಾಡಿದ ಪ್ರಧಾನಿ ವಾಜಪೇಯಿ- ಡಿಎಂಕೆಯಾಂದಿಗಿನ ಕಾಂಗ್ರೆಸ್ ಮೈತ್ರಿಯನ್ನು ಚುನಾವಣಾ ಲಾಭ ಪಡೆಯುವ ಉದ್ದೇಶದ ಸಂಕುಚಿತ ಮೈತ್ರಿ ಎಂದು ಬಣ್ಣಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications