ಹೆಗಡೆ ಅಂತಿಮಯಾತ್ರೆಯಲ್ಲಿ ಅಡ್ವಾಣಿ, ಚಂದ್ರಶೇಖರ್, ಗೌಡ
ಹೆಗಡೆ ಅಂತಿಮಯಾತ್ರೆಯಲ್ಲಿ ಅಡ್ವಾಣಿ, ಚಂದ್ರಶೇಖರ್, ಗೌಡ
ಸಕಲ ಸರ್ಕಾರಿ ಗೌರವಗಳೊಂದಿಗೆ ಹೆಗಡೆ ಅಂತಿಮ ಸಂಸ್ಕಾರ
ಹೆಸರುಘಟ್ಟ ರಸ್ತೆಯಲ್ಲಿನ ಹೆಗಡೆ ಅವರ ತೋಟದಲ್ಲಿ ನಡೆದ ಅಂತ್ಯಸಂಸ್ಕಾರದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಮಂಗಳವಾರ ಬೆಳಗಿನ ಜಾವದಿಂದಲೇ ದುಃಖತಪ್ತ ಸಹಸ್ರಾರು ಅಭಿಮಾನಿಗಳ ಹೊಳೆಯೇ ಹರಿದು ಬರುತಿತ್ತು. ಹೆಗಡೆ ಅವರ ಪಾರ್ಥಿವ ಶರೀರವನ್ನು ಸದಾಶಿವನಗರದ ಬಂಗಲೆಯಿಂದ ಬೆಂಗಳೂರಿನ ಹೊರವಲಯದಲಿ ್ಲರುವ ಅವರ ತೋಟಕ್ಕೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.
ಉಪಪ್ರಧಾನಿ ಎಲ್ ಕೆ ಅಡ್ವಾಣಿ , ಮುಖ್ಯಮಂತ್ರಿ ಕೃಷ್ಣ , ರಾಜ್ಯಪಾಲ ಟಿ.ಎನ್.ಚರ್ತುವೇದಿ, ವರನಟ ರಾಜ್ಕುಮಾರ್ , ಮಾಜಿ ಪ್ರಧಾನಿಗಳಾದ ದೇವೇಗೌಡ ಹಾಗೂ ಚಂದ್ರಶೇಖರ್, ಎನ್ಸಿಪಿ ನಾಯಕ ಶರದ್ಪವಾರ್ ಸೇರಿದಂತೆ ಇನ್ನಿತರ ಪ್ರಮುಖರು ಅಗಲಿದ ನಾಯಕನಿಗೆ ಅಂತಿಮ ಗೌರವ ಅರ್ಪಿಸಿದರು.
ಹೆಗಡೆಯವರ ತೋಟದಲ್ಲಿ ನೆರೆದಿದ್ದ ಕುಟುಂಬದ ಸದಸ್ಯರು, ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಭರತ್ ಹೆಗಡೆ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ನೆರೆದಿದ್ದ ಸಹಸ್ರಾರು ಅಭಿಮಾನಿಗಳು ಅಗಲಿದ ನಾಯಕನಿಗೆ ಜಯಘೋಷ ಕೂಗುತ್ತಿದ್ದ ದೃಶ್ಯಗಳು, ಕಂಬನಿ ಮಿಡಿಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.
ಎಪ್ಪತ್ತೇಳರ ಹರೆಯದ ಹೆಗಡೆ ಕಳೆದ ಒಂದು ವರ್ಷದಿಂದ ಅನಾರೋಗ್ಯ ಪೀಡಿತರಾಗಿದ್ದರು. ಅವರ ನಿಧನದ ಪ್ರಯುಕ್ತ ರಾಜ್ಯದಲ್ಲಿ ಮಂಗಳವಾರ ರಜೆ ಘೋಷಿಸಲಾಗಿತ್ತು .
(ಪಿಟಿಐ)
ಪೂರಕ ಓದು-
ರಾಮಕೃಷ್ಣ ಹೆಗಡೆ : ಕಣ್ಮರೆಯಾದ ರಾಜಗುರು
ಹೂವು ತಂದ ಸುಪುತ್ರನ ಅಗಲಿಕೆಗೆ ರೋದಿಸುತ್ತಿರುವ ಉತ್ತರಕನ್ನಡ
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications