ಅವಧಿಗೆ ಮುನ್ನ ವಿಧಾನಸಭೆ ಚುನಾವಣೆ ಸಾಧ್ಯತೆಯಿಲ್ಲ -ಎಸ್ಸೆಂ.ಕೃಷ್ಣ
ಅವಧಿಗೆ ಮುನ್ನ ವಿಧಾನಸಭೆ ಚುನಾವಣೆ ಸಾಧ್ಯತೆಯಿಲ್ಲ -ಎಸ್ಸೆಂ.ಕೃಷ್ಣ
ರಾಜ್ಯದಲ್ಲಿನ ರಾಜಕೀಯ ವಿದ್ಯಮಾನಗಳ ಕುರಿತು ಹೈಕಮಾಂಡ್‌ನೊಂದಿಗೆ ಚರ್ಚೆ...
ಲೋಕಸಭಾ ಚುನಾವಣೆಗಳ ಜೊತೆಯಲ್ಲಿಯೇ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆಗಳನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಕೃಷ್ಣ - ಈ ವದಂತಿಗಳು ಸತ್ಯಕ್ಕೆ ದೂರವಾದವು ಎಂದು ಬಣ್ಣಿಸಿದರು. ಜ.19ರ ಸೋಮವಾರ ಬೆಂಗಳೂರಿನಲ್ಲಿ ನಡೆದ ಹಿರಿಯ ಪೋಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.
ವಿಧಾನಸಭೆ ಚುನಾವಣೆಯು ಸೆಪ್ಟಂಬರ್ ತಿಂಗಳಿನಲ್ಲಿ ನಡೆಯಲಿದೆ ಎಂದ ಕೃಷ್ಣ , ರಾಜ್ಯದಲ್ಲಿನ ರಾಜಕೀಯ ವಿದ್ಯಮಾನಗಳ ಕುರಿತು ಪಕ್ಷದ ಹೈಕಮಾಂಡ್‌ನೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು. ರಾಜ್ಯ ವಿಧಾನಸಭೆಯ ಚುನಾವಣೆಯ ಅವಧಿಯ ಬಗ್ಗೆ ಕೇಂದ್ರ ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸಿರುವಿರಾ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೃಷ್ಣ- ರಾಜ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿರುವೆ ಎಂದಷ್ಟೇ ಉತ್ತರಿಸಿದರು.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿ












Click it and Unblock the Notifications