ಶಿವಮೊಗ್ಗದ ಸಾಗರದಲ್ಲಿ ಸಾಗರದೋಪಾದಿ ಹಬ್ಬುತ್ತಿರುವ ಕಾಮಾಲೆ
ಶಿವಮೊಗ್ಗದ ಸಾಗರದಲ್ಲಿ ಸಾಗರದೋಪಾದಿ ಹಬ್ಬುತ್ತಿರುವ ಕಾಮಾಲೆ
ಸಾವಿರಕ್ಕೂ ಹೆಚ್ಚು ಮಂದಿಗೆ ಕಾಮಾಲೆ, ಆಸ್ಪತ್ರೆಗೆ ಬಂದವರು 60 ಮಂದಿ !
ಸಾವಿರಕ್ಕೂ ಹೆಚ್ಚು ಮಂದಿ ಕಾಮಾಲೆ ರೋಗದಿಂದ ಬಳಲುತ್ತಿದ್ದಾರೆ ಎಂದು ಅನಧಿಕೃತ ಮೂಲಗಳು ತಿಳಿಸಿದರೂ, ಈವರೆಗೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದವರ ಸಂಖ್ಯೆ 60 ಮಾತ್ರ. ಉಳಿದವರು ಸಾಂಪ್ರದಾಯಿಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಮಧ್ಯವಯಸ್ಕರು, ಮಕ್ಕಳು ಹಾಗೂ ಹೆಂಗಸರಲ್ಲಿ ಕಾಮಾಲೆಯ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಕಾಣುತ್ತಿದ್ದು , ಇವರಲ್ಲಿ ಬಹುತೇಕರು ಮನೆಮದ್ದಿಗೆ ಶರಣಾಗಿದ್ದಾರೆ. ಕಾಮಾಲೆ ಸೋಂಕಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಮುನ್ಸಿಪಲ್ ಇಲಾಖೆ ಪಟ್ಟಣದಲ್ಲಿ ವ್ಯಾಪಕ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಪಟ್ಟಣದಲ್ಲಿ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದ್ದಾರೆ.
700ಕ್ಕೂ ಹೆಚ್ಚುಮಂದಿ ರೋಗಿಗಳು ನಾಟಿ ವೈದ್ಯರಿಂದ ಕಾಮಾಲೆಗೆ ಚಿಕಿತ್ಸೆ ಪಡೆದಿದ್ದಾರೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ, ಕಾಮಾಲೆಗೆ ಸಂಬಂಧಿಸಿದಂತೆ ಪ್ರತಿ ಮನೆಯ ಸಮೀಕ್ಷೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ. ಸಾಗರ ಪಟ್ಟಣದ ಜನಸಂಖ್ಯೆ ಸುಮಾರು 45 ಸಾವಿರ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications