ಚೀನಾದಲ್ಲಿ ಸಾರ್ಸ್‌ ಸಾರ್ಸ್‌! ಬೆಂಗಳೂರಲ್ಲಿ ಮುನ್ನೆಚ್ಚರಿಕೆ ಕ್ರಮ

ಚೀನಾದಲ್ಲಿ ಸಾರ್ಸ್‌ ಸಾರ್ಸ್‌! ಬೆಂಗಳೂರಲ್ಲಿ ಮುನ್ನೆಚ್ಚರಿಕೆ ಕ್ರಮ
ವಿದೇಶಿ ಪ್ರಯಾಣಿಕರ ಮೇಲೆ ವಿಮಾನ ನಿಲ್ದಾಣ ಅಧಿಕಾರಿಗಳ ಹದ್ದಿನ ಕಣ್ಣು

ಬೆಂಗಳೂರು : ಚೀನಾದಲ್ಲಿ ಮಾರಣಾಂತಿಕ ಸಾರ್ಸ್‌ (Severe Acute Respiratory Syndrome) ರೋಗ ಮರುಕಳಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರಿನ ವಿಮಾನ ನಿಲ್ದಾಣದ ಆರೋಗ್ಯ ಅಧಿಕಾರಿಗಳು ಹಾಗೂ ನಗರದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ಸ್‌ ಬಗೆಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಾರಿ ರಾಜ್ಯದಲ್ಲಿ ಯಾವುದೇ ಸಾರ್ಸ್‌ ಪ್ರಕರಣಗಳು ವರದಿಯಾಗಿಲ್ಲವಾದರೂ, ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ವಿದೇಶಗಳಿಂದ ಬೆಂಗಳೂರಿಗೆ ಬರುವ ಪ್ರತಿಯಾಬ್ಬ ಪ್ರಯಾಣಿಕನ ಬಗೆಗೂ ವಿಮಾನ ನಿಲ್ದಾಣದ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಶಂಕಿತ ವ್ಯಕ್ತಿಗಳನ್ನು ತಕ್ಷಣವೇ ತಪಾಸಣೆಗೆ ಒಳಪಡಲು ಸಿದ್ಧತೆಗಳನ್ನು ನಡೆಸಲಾಗಿದೆ. ಸದ್ಯಕ್ಕೆ ಯಾವುದೇ ಸಾರ್ಸ್‌ ಸೋಂಕಿನ ವ್ಯಕ್ತಿ ಬೆಂಗಳೂರಿಗೆ ಆಗಮಿಸಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ಚೀನಾದ ದಕ್ಷಿಣ ಭಾಗದಲ್ಲಿ ಮೂರು ಸಾರ್ಸ್‌ ಪ್ರಕರಣಗಳು ದಾಖಲಾಗಿದ್ದು , ಚೀನಾದ್ಯಾಂತ ಸಾರ್ಸ್‌ ಕುರಿತ ಆತಂಕ ಉಂಟಾಗಿದೆ. ಎಂಟು ತಿಂಗಳ ನಂತರ ಸಾರ್ಸ್‌ ಚೀನಾದಲ್ಲಿ ಮರುಕಳಿಸಿದೆ. ಆದರೆ, ಪ್ರಸ್ತುತ ಸಾರ್ಸ್‌ ರೋಗಾಣುಗಳು ಮೊದಲಿನ ತೀವ್ರತೆ ಉಳಿಸಿಕೊಂಡಿಲ್ಲ ಎಂದು ಚೀನಾದ ಅಧಿಕಾರಿಗಳು ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

Post your views

ಮುಖಪುಟ / ವಾಟ್ಸ್‌ ಹಾಟ್‌

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+