ರಾಜ್ಯದಲ್ಲಿ ಮಕ್ಕಳ ಅಕಾಡೆಮಿ ಸ್ಥಾಪನೆಗೆ ಸರ್ಕಾರದ ಆಸಕ್ತಿ -ಖರ್ಗೆ
ರಾಜ್ಯದಲ್ಲಿ ಮಕ್ಕಳ ಅಕಾಡೆಮಿ ಸ್ಥಾಪನೆಗೆ ಸರ್ಕಾರದ ಆಸಕ್ತಿ -ಖರ್ಗೆ
ಗುಲ್ಬರ್ಗಾದಲ್ಲಿ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ
ಸಾಹಿತ್ಯ ಅಕಾಡೆಮಿ, ಕೊಡವ ಅಕಾಡೆಮಿ, ಯಕ್ಷಗಾನ ಮತ್ತು ಜಾನಪದ ಅಕಾಡೆಮಿ, ತುಳು ಅಕಾಡೆಮಿ, ಮುಂತಾದ ಅಕಾಡೆಮಿಗಳು ರಾಜ್ಯದಲ್ಲಿವೆ. ಆದರೆ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಲಿಕ್ಕೋಸುಗ ಪ್ರತ್ಯೆಕವಾದ ಅಕಾಡೆಮಿಯಾಂದಿಲ್ಲ . ಈ ಕೊರತೆಯನ್ನು ನೀಗಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಅವರು ಗುಲ್ಬರ್ಗಾದಲ್ಲಿ ಸೋಮವಾರ ಪ್ರಾರಂಭವಾದ ಮಕ್ಕಳ ಸಾಹಿತ್ಯ ಮತ್ತು ಸಂಸ್ಕೃತಿ ಉತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಮಾಜ, ಸಂಸ್ಕೃತಿ ಹಾಗೂ ಸಾಹಿತ್ಯದ ಕುರಿತು ಮಕ್ಕಳಲ್ಲಿ ತಿಳಿವಳಿಕೆ ಮೂಡಿಸುವ ಚಟುವಟಿಕೆಗಳು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯಬೇಕಾಗಿವೆ. ಅದೇರೀತಿ ಮಕ್ಕಳಲ್ಲಿನ ಪ್ರತಿಭೆಯ ವಿಕಾಸಕ್ಕೆ ಪೂರಕವಾಗುವಂಥ ಸಿನಿಮಾಗಳು ಕನ್ನಡದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬರಬೇಕಾಗಿವೆ ಎಂದು ಖರ್ಗೆ ಹೇಳಿದರು.
ಸಮಾರಂಭದಲ್ಲಿ ಭಾಗವಹಿಸಿದ್ದ ಲೋಕೋಪಯೋಗಿ ಸಚಿವ ಧರ್ಮಸಿಂಗ್- ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಪೋಷಕರು ಹಾಗೂ ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು. ರಾಜ್ಯ ಸರ್ಕಾರದ ಅಕ್ಷರ ದಾಸೋಹ ಯೋಜನೆಯಿಂದಾಗಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗೆ ಬರುತ್ತಿದ್ದಾರೆ ಎಂದು ಧರ್ಮಸಿಂಗ್ ಹೇಳಿದರು.
ಕಾರ್ಮಿಕ ಸಚಿವ ಖಮರುಲ್ ಇಸ್ಲಾಂ, ಸಂಸದ ಇಕ್ಬಾಲ ಅಹ್ಮದ ಸರಡಗಿ, ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಪುರಂ ಜಿ.ವೆಂಕಟೇಶ, ಸಾಹಿತಿ ಪ್ರೊ.ವಸಂತ ಕುಷ್ಟಗಿ ಮುಂತಾದವರು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಅವರು ಮಕ್ಕಳ ಸಾಹಿತ್ಯ ಮತ್ತು ಸಂಸ್ಕೃತಿ ಸಮ್ಮೇಳನ ಅಧ್ಯಕ್ಷತೆ ವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications