ಪ್ರಗತಿಪರ ಜನತಾದಳ ರಾಜ್ಯಾಧ್ಯಕ್ಷ ಕೆ.ಎನ್.ನಾಗೇಗೌಡ ನಿಧನ
ಪ್ರಗತಿಪರ ಜನತಾದಳ ರಾಜ್ಯಾಧ್ಯಕ್ಷ ಕೆ.ಎನ್.ನಾಗೇಗೌಡ ನಿಧನ
ಚುನಾವಣೆ ಮಾತುಕತೆಗಾಗಿ ದೆಹಲಿಗೆ ಬಂದಿದ್ದವರು ಕೊನೆಯುಸಿರೆಳೆದರು...
ಜ್ವರದಿಂದ ಬಳಲುತ್ತಿದ್ದ ನಾಗೇಗೌಡ ಅವರಿಗೆ ಗುರುವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತು. ಕರ್ನಾಟಕ ಭವನದಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಕರೆದೊಯ್ಯುವ ಸಂದರ್ಭದಲ್ಲಿ ನಾಗೇಗೌಡ ಕೊನೆಯುಸಿರೆಳೆದರು ಎಂದು ಪ್ರಗತಿಪರ ಜನತಾದಳದ ಮುಖಂಡ ಉಮೇಶ ಕತ್ತಿ ತಿಳಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ , ವಿವಿಧ ನಾಯಕರೊಂದಿಗೆ ಚುನಾವಣಾ ಹೊಂದಾಣಿಕೆಯ ಕುರಿತು ಮಾತುಕತೆ ನಡೆಸಲಿಕ್ಕಾಗಿ ನಾಗೇಗೌಡ ದೆಹಲಿಗೆ ಬಂದಿದ್ದರು ಎಂದು ಪ್ರಗತಿಪರ ಜನತಾದಳದ ಮುಖಂಡ ಬಿ.ಸೋಮಶೇಖರ್ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಗುರ್ತಿಸಿಕೊಳ್ಳುವ ಮೂಲಕ ರಾಜಕೀಯ ಪ್ರವೇಶ ಮಾಡಿದ ನಾಗೇಗೌಡ, ನಂತರದ ದಿನಗಳಲ್ಲಿ ಜನತಾದಳ ಸೇರಿಕೊಂಡಿದ್ದರು. ಜೆ.ಎಚ್.ಪಟೇಲ್ ಅವರ ಮಂತ್ರಿಮಂಡಲದಲ್ಲಿ ಬೃಹತ್ ನೀರಾವರಿ ಸಚಿವರಾಗಿ ನಾಗೇಗೌಡ ಕಾರ್ಯ ನಿರ್ವಹಿಸಿದ್ದರು.
ಇತ್ತೀಚೆಗೆ ನಿಧನರಾದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಅನುಪಸ್ಥಿತಿಯಿಂದಾಗಿ ಬಡವಾಗಿರುವ ಪ್ರಗತಿಪರ ಜನತಾದಳಕ್ಕೆ ನಾಗೇಗೌಡರ ನಿರ್ಗಮನ ಮತ್ತೊಂದು ಪೆಟ್ಟು ನೀಡಿದಂತಾಗಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications