ಬೆಂಗಳೂರ ಕಟಕಟೇಲೆ ಜಯಾ ವಿಚಾರಣೆ -ಸುಪ್ರಿಂ ಕೋರ್ಟ್‌

ಬೆಂಗಳೂರ ಕಟಕಟೇಲೆ ಜಯಾ ವಿಚಾರಣೆ -ಸುಪ್ರಿಂ ಕೋರ್ಟ್‌
ಪ್ರಕರಣವನ್ನು ಬೇರೆಡೆ ವರ್ಗಾಯಿಸುವ ಜಯಾ ಮನವಿ ತಿರಸ್ಕೃತ

ನವದೆಹಲಿ : ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ, ಅಕ್ರಮ ಆಸ್ತಿಗೆ ಸಂಬಂಧಿಸಿದ ವಿಚಾರಣೆಯನ್ನು ಬೆಂಗಳೂರಿನಲ್ಲಿಯೇ ಎದುರಿಸುವಂತೆ ಸುಪ್ರಿಂಕೋರ್ಟ್‌ ಆದೇಶಿಸಿದೆ.

ಪ್ರಕರಣದ ತನಿಖೆಯನ್ನು ಕರ್ನಾಟಕದಿಂದ ಬೇರೆಡೆಗೆ ವರ್ಗಾಯಿಸುವಂತೆ ಮುಖ್ಯಮಂತ್ರಿ ಜಯಲಲಿತಾ ಅವರು ಸಲ್ಲಿಸಿದ್ದ ಮನವಿಯನ್ನು ಸೋಮವಾರ ತಿರಸ್ಕರಿಸಿದ ಇಬ್ಬರು ನ್ಯಾಯಮೂರ್ತಿಗಳ ನ್ಯಾಯಪೀಠ, ಈಮುನ್ನ ಆದೇಶಿದಂತೆ ವಿಚಾರಣೆ ಬೆಂಗಳೂರಿನಲ್ಲಿಯೇ ನಡೆಯಲಿದೆ ಎಂದು ಸ್ಪಷ್ಟಪಡಿಸಿತು.

ಕಾವೇರಿ ನೀರು ಹಂಚಿಕೆ ಸಂಬಂಧ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಉದ್ವಿಗ್ನ ಪರಿಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಚಾರಣೆಗೆ ಅಡೆತಡೆಗಳುಂಟಾಗುವ ನಿರೀಕ್ಷೆಯಿದೆ. ಆದುದರಿಂದ ಪ್ರಕರಣದ ತನಿಖೆಯನ್ನು ಪಾಂಡಿಚೆರಿ, ಕೇರಳ ಅಥವಾ ಆಂಧ್ರಪ್ರದೇಶಗಳಿಗೆ ವರ್ಗಾಯಿಸುವಂತೆ ಜಯಲಲಿತಾ ಕೋರಿದ್ದರು.

ಪ್ರಕರಣದ ವಿಚಾರಣೆ ನಡೆಸಲು ಯಾವುದೇ ಅಡ್ಡಿಯಿಲ್ಲ . ಜಯಲಲಿತಾ ಅವರಿಗೆ ಸೂಕ್ತ ರಕ್ಷಣೆ ಒದಗಿಸಲಾಗುವುದು ಎಂದು ಕರ್ನಾಟಕ ಸರ್ಕಾರ ಸುಪ್ರಿಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿತ್ತು .

(ಪಿಟಿಐ)

ಮುಖಪುಟ / ವಾರ್ತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+