ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಗೆ ಪ್ರಗತಿಪರದಳ ಒತ್ತಾಯ

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಗೆ ಪ್ರಗತಿಪರದಳ ಒತ್ತಾಯ
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಕೃಷ್ಣ ಸರ್ಕಾರ -ಸೋಮಶೇಖರ್‌ ಆರೋಪ

ಬೆಂಗಳೂರು : ರಾಜ್ಯ ವಿಧಾನಸಭೆ ವಿಸರ್ಜನೆಗೊಂಡಿರುವುದರಿಂದ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆಯನ್ನು ಜಾರಿಗೊಳಿಸಬೇಕು ಎಂದು ರಾಜ್ಯ ಪ್ರಗತಿಪರ ಜನತಾದಳ ಒತ್ತಾಯಿಸಿದೆ.

ಪಾರದರ್ಶಕ ಹಾಗೂ ನಿರ್ಭೀತ ಚುನಾವಣೆಗಳನ್ನು ನಡೆಸುವ ದೃಷ್ಟಿಯಲ್ಲಿ ರಾಜ್ಯಪಾಲರ ಆಡಳಿತವನ್ನು ರಾಜ್ಯದಲ್ಲಿ ಜಾರಿಗೊಳಿಸುವುದು ಅನಿವಾರ್ಯವಾಗಿದೆ. ಆದುದರಿಂದ ಈ ಕೂಡಲೇ ರಾಜ್ಯಪಾಲರ ಆಡಳಿತ ಜಾರಿಗೊಳಿಸಬೇಕು ಎಂದು ಪ್ರಗತಿಪರ ಜನತಾದಳದ ಮುಖಂಡ ಬಿ.ಸೋಮಶೇಖರ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ನೇತೃತ್ವದ ಸರ್ಕಾರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಚಟುವಟಿಕೆಗಳ ಮೂಲಕ ನಿಧಿ ಸಂಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸೋಮಶೇಖರ್‌ ದೂರಿದರು.

ರಾಜ್ಯದಲ್ಲಿ ಗಣಿಗಾರಿಕೆಗೆ ಅನಧಿಕೃತವಾಗಿ ಗುತ್ತಿಗೆ ನೀಡಲಾಗಿದ್ದು , ಈ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಪ್ರಗತಿಪರ ಜನತಾದಳದ ಮುಖಂಡ ಸೋಮಶೇಖರ್‌ ಒತ್ತಾಯಿಸಿದರು.

ತನಿಖೆಗೆ ಸಿದ್ಧರಾಮಯ್ಯ ಆಗ್ರಹ

ವಿವಿಧ ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಕೃಷ್ಣ ಅವರ ಸರ್ಕಾರದ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷ ಸಿದ್ಧರಾಮಯ್ಯ ರಾಜ್ಯಪಾಲ ಚತುರ್ವೇದಿ ಅವರನ್ನು ಸೋಮವಾರ ಒತ್ತಾಯಿಸಿದ್ದಾರೆ.

ದಕ್ಷಿಣ ಭಾರತದ ಅತ್ಯಂತ ಭ್ರಷ್ಟ ಸರ್ಕಾರ ಎಂದು ಮುಖ್ಯಮಂತ್ರಿ ಕೃಷ್ಣ ಅವರ ಸರ್ಕಾರವನ್ನು ಸಿದ್ಧರಾಮಯ್ಯ ದೂಷಿಸಿದರು.

(ಪಿಟಿಐ)

ಮುಖಪುಟ / ವಾರ್ತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+