‘ಜನತಾ’ ಕೈಬಿಟ್ಟು ಎನ್‌ಡಿಎ ಜೊತೆಯಿರಲು ಪ್ರಗತಿಪರರ ಒಲವು
‘ಜನತಾ’ ಕೈಬಿಟ್ಟು ಎನ್‌ಡಿಎ ಜೊತೆಯಿರಲು ಪ್ರಗತಿಪರರ ಒಲವು
ಸಾಲು ಸಾಲು ವಲಸೆಯಿಂದ ಕಂಗೆಡದೆ ಅಸ್ತಿತ್ವ ಉಳಿಸಿಕೊಳ್ಳುವೆವು -ಬೊಮ್ಮಾಯಿ
ನೇಗಿಲು ಹೊತ್ತ ರೈತನ ಗುರುತಿನ ಜನತಾ ಪಕ್ಷದೊಂದಿಗೆ ಪ್ರಗತಿಪರ ಜನತಾದಳ ವಿಲೀನ ಹೊಂದುವ ಕುರಿತು ವದಂತಿಗಳು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿದ್ದವು. ಈ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಪ್ರಗತಿಪರ ದಳದ ರಾಷ್ಟ್ರಾಧ್ಯಕ್ಷ ಎಸ್.ಆರ್.ಬೊಮ್ಮಾಯಿ, ತಮ್ಮ ಪಕ್ಷ ಸ್ವತಂತ್ರ ಅಸ್ತಿತ್ವ ಉಳಿಸಿಕೊಳ್ಳುತ್ತದೆ ಎಂದಿದ್ದಾರೆ.
ಫೆ.28ರ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್- ಎನ್‌ಡಿಎ ಜೊತೆ ಒಂದಾಗಿ ಸಾಗಲು ಪ್ರಗತಿಪರ ಜನತಾದಳ ನಿರ್ಧರಿಸಿದೆ ಎಂದು ಪ್ರಕಟಿಸಿದರು.
ಈಚಿನ ಬೆಳವಣಿಗೆಗಳಲ್ಲಿ ಜನತಾ ಪಕ್ಷದೊಂದಿಗೆ ಚುನಾವಣಾ ಹೊಂದಾಣಿಕೆಯನ್ನು ಮಾಡಿಕೊಳ್ಳದಿರಲು ಪ್ರಗತಿಪರರು ನಿರ್ಧರಿಸಿದ್ದಾರೆ. ಇದರಿಂದಾಗಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಒಕ್ಕೂಟದೊಂದಿಗೆ ಪ್ರಗತಿಪರ ದಳ ಹೊಂದಾಣಿಕೆ ಮಾಡಿಕೊಳ್ಳುವ ನಿರೀಕ್ಷೆಯಿದೆ.
ಜನತಾ ಪಕ್ಷದ ಜೊತೆಗಿನ ಹೊಂದಾಣಿಕೆ ಕುರಿತಾದ ಮಾತುಕತೆಗೆ ಎಬಿಪಿಜೆಡಿ ನಾಯಕರು ಫೆ.27ರಂದು ಸಭೆ ಸೇರಿದ್ದರು. ಸಾಧ್ಯಾಸಾಧ್ಯತೆಗಳು ಮತ್ತು ಪಕ್ಷದ ಕಾರ್ಯಕರ್ತರ ನಿಲುವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಬಳಿಕ ಹೊಂದಾಣಿಕೆ ಪ್ರಸ್ತಾವವನ್ನು ಕೈಬಿಡಲಾಯಿತು. ಎನ್‌ಡಿಎ ಜೊತೆ ಹೊಂದಾಣಿಕೆ ಕುರಿತು ಮಾತುಕತೆ ನಡೆಸುತ್ತಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಭವನೀಯ ಆಭ್ಯರ್ಥಿಗಳ ಪಟ್ಟಿಯನ್ನು ಆಯಾಯ ಜಿಲ್ಲೆಯ ಅಧ್ಯಕ್ಷರಿಂದ ಪಕ್ಷ ಪಡೆಯಲಿದೆ. ಶೀಘ್ರದಲ್ಲೇ ಆಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications