ಜಾಣ ವಿದ್ಯಾರ್ಥಿಯಂತೆ ಚುನಾವಣಾ ಪರೀಕ್ಷೆಗೆ ಸಜ್ಜು - ಅಡ್ವಾಣಿ
ಜಾಣ ವಿದ್ಯಾರ್ಥಿಯಂತೆ ಚುನಾವಣಾ ಪರೀಕ್ಷೆಗೆ ಸಜ್ಜು - ಅಡ್ವಾಣಿ
ಮುಂದಿನ ಐದು ವರ್ಷಗಳಲ್ಲೂ ವಾಜಪೇಯಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ
ಅಟಲ್ ಸಂದೇಶ ಯಾತ್ರೆಗೆ ಫೆ.29ರಂದು ಚಾಲನೆ ನೀಡಿ, ಭಾರೀ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅಡ್ವಾಣಿ- ಎಂಥ ಕಠಿಣ ಪ್ರಶ್ನೆಗೂ ಉತ್ತರಿಸಲು ಸಿದ್ಧತೆ ನಡೆಸಿರುವ ಜಾಣ ವಿದ್ಯಾರ್ಥಿಯಂತೆ ಚುನಾವಣೆ ಎನ್ನುವ ಪರೀಕ್ಷೆಯನ್ನು ಎದುರಿಸಲು ಬಿಜೆಪಿ ಸಜ್ಜಾಗಿದೆ. ಈ ಪರೀಕ್ಷೆಯಲ್ಲಿ ಬಿಜೆಪಿಗೆ ಪ್ರಥಮ ದರ್ಜೆ ಖಚಿತ ಎಂದರು.
ಕಳೆದ 6 ವರ್ಷಗಳಲ್ಲಿ ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಒಕ್ಕೂಟ ಸರ್ಕಾರ ತನ್ನ ಸ್ಥಿರತೆಯನ್ನು ವಿಶ್ವಕ್ಕೆ ತೋರಿಸಿದೆ. ಭಾರತವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ವಾಜಪೇಯಿ ಅವರು ಮುಂದಿನ 5 ವರ್ಷಗಳ ಕಾಲವೂ ಸರ್ಕಾರದ ನೇತೃತ್ವ ವಹಿಸುವ ಸಾಧ್ಯತೆಗಳು ನಿಚ್ಚಳವಾಗಿವೆ ಎಂದು ಉಪ ಪ್ರಧಾನಿ ಹೇಳಿದರು.
ತುಮಕೂರಿನ ಸಭೆಯಲ್ಲಿ ಅಡ್ವಾಣಿಯವರು ಮಾತನಾಡುತ್ತಿರುವ ಸಂದರ್ಭದಲ್ಲೇ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿತು. ಈ ಕುರಿತು ಪ್ರತಿಕ್ರಿಯಿಸಿದ ಅಡ್ವಾಣಿ- ತುಮಕೂರಿಗೆ ಅನೇಕ ಸಲ ಬಂದಿದ್ದೇನೆ. ಆದರೆ, ಚುನಾವಣಾ ದಿನಾಂಕಗಳು ಪ್ರಕಟವಾದ ಈ ಹೊತ್ತು ತುಮಕೂರಿನಲ್ಲಿದ್ದೇನೆ. ತುಮಕೂರನ್ನು ನಾನು ಎಂದಿಗೂ ಮರೆಯಲು ಸಾಧ್ಯವಾಗುವುದಿಲ್ಲ ಎಂದರು.
ಮಂಗಳೂರಿನಲ್ಲಿ ಜರುಗಿದ ಭಾರತ ಮಾತಾ ಪೂಜಾ ಕಾರ್ಯಕ್ರಮದಲ್ಲೂ ಉಪ ಪ್ರಧಾನಿ ಅಡ್ವಾಣಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications