ಇತಿಹಾಸ ಸೃಷ್ಟಿ ಕನಸಿನೊಂದಿಗೆ ಅನಂತ್- ಸಾಂಗ್ಲಿಯಾನ ನಾಮಪತ್ರ
ಇತಿಹಾಸ ಸೃಷ್ಟಿ ಕನಸಿನೊಂದಿಗೆ ಅನಂತ್- ಸಾಂಗ್ಲಿಯಾನ ನಾಮಪತ್ರ
ದಕ್ಷಿಣಭಾರತದಲ್ಲಿ ಚಕ್ರಾಧಿಪತ್ಯ ಸ್ಥಾಪನೆಗೆ ಕರ್ನಾಟಕದಲ್ಲಿ ಗುದ್ದಲಿಪೂಜೆ -ಜೇಟ್ಲಿ
ಅಪಾರ ಅಭಿಮಾನಿಗಳ ಜೈಕಾರ, ಡ್ರಂಗಳ ಮೊಳಗು ಹಾಗೂ ಪಟಾಕಿಗಳ ಸದ್ದಿನ ನಡುವೆ ಅನಂತಕುಮಾರ್ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಚುನಾವಣೆ ವ್ಯವಹಾರಗಳ ಉಸ್ತುವಾರಿ ವಹಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಹಾಜರಿದ್ದರು.
ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಬಿಜೆಪಿ ಇತಿಹಾಸ ಸೃಷ್ಟಿಸುತ್ತದೆ. ಬೆಂಗಳೂರು ದಕ್ಷಿಣ ಹಾಗೂ ಉತ್ತರ ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುತ್ತದೆ. ದಕ್ಷಿಣಭಾರತದಲ್ಲಿ ಮೊಟ್ಟ ಮೊದಲ ಬಾರಿಗ ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಜೇಟ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಹೇಳಿದರು.
ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ರಾಜ್ಯ ಬಿಜೆಪಿ ಪ್ರಧಾನಿ ವಾಜಪೇಯಿ ಅವರಿಗೆ ಬಲ ತುಂಬಲಿದೆ ಎಂದು ಅನಂತಕುಮಾರ್ ಹೇಳಿದರು. ಮಂಗಳೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನಿರಾಕರಣೆಗೆ ಒಳಗಾಗಿರುವ ಮಾಜಿ ಕೇಂದ್ರ ಸಚಿವ ಧನಂಜಯ ಕುಮಾರ್ ಈ ಸಂದರ್ಭದಲ್ಲಿ ಅನಂತಕುಮಾರ್ ಜೊತೆಗಿದ್ದರು.
ಸಾಂಗ್ಲಿಯಾನ ಉಮೇದುವಾರಿಕೆ : ಬೆಂಗಳೂರು ಮಹಾನಗರದ ಮಾಜಿ ಪೊಲೀಸ್ ಆಯುಕ್ತ ಎಚ್.ಟಿ.ಸಾಂಗ್ಲಿಯಾನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು. ಈ ಕ್ಷೇತ್ರದಲ್ಲಿ - ಕಾಂಗ್ರೆಸ್‌ನಿಂದ ಸಿ.ಕೆ.ಜಾಫರ್ ಷರೀಫ್ ಹಾಗೂ ಜಾತ್ಯತೀತ ಜನತಾದಳದಿಂದ ಸಿ.ಎಂ.ಇಬ್ರಾಹಿಂ ಸ್ಪರ್ಧಿಸುತ್ತಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು












Click it and Unblock the Notifications