112 ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿ ಪ್ರಕಟ ; ಬೇಗ್‌ಗೆ ಜಾಕ್‌ಪಾಟ್
112 ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿ ಪ್ರಕಟ ; ಬೇಗ್‌ಗೆ ಜಾಕ್‌ಪಾಟ್
ಮೊದಲ ಪಟ್ಟಿಯಲ್ಲಿ ಸಚಿವರಾದ ಖರ್ಗೆ, ಜಯಚಂದ್ರ, ರೇವಣ್ಣ
ಮೊದಲ ಹಂತದ ವಿಧಾನಸಭಾ ಚುನಾವಣೆಗೆ 112 ಅಭ್ಯರ್ಥಿಗಳ ಹೆಸರುಗಳನ್ನು ಕಾಂಗ್ರೆಸ್ ಮಂಗಳವಾರ (ಮಾ.30) ಪ್ರಕಟಿಸಿತು. ಈ ಪಟ್ಟಿಯಲ್ಲಿ ಮಾಜಿ ಸಚಿವ ರೋಷನ್‌ಬೇಗ್ ಹಾಗೂ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಸೇರಿದ್ದಾರೆ. ಛಾಪಾ ಕಳಂಕ ಹೊಂದಿರುವ ಬೇಗ್ ಅವರಿಗೆ ಟಿಕೆಟ್ ನಿರಾಕರಿಸಲಾಗುತ್ತದೆ ಎಂದು ಈ ಮುನ್ನ ವದಂತಿಗಳು ಹಬ್ಬಿದ್ದವು.
ಏಪ್ರಿಲ್ 20ರಂದು ನಡೆಯುವ 120 ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ 112 ಅಭ್ಯರ್ಥಿಗಳ ಹೆಸರುಗಳನ್ನಷ್ಟೇ ಪ್ರಕಟಿಸಿದೆ. ಉಳಿದ ಅಭ್ಯರ್ಥಿಗಳ ಹೆಸರುಗಳನ್ನು ತದನಂತರ ಪ್ರಕಟಿಸುವುದಾಗಿ ಪಕ್ಷದ ಪ್ರಕಟಣೆ ತಿಳಿಸಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾ.31 ಕೊನೆದಿನ.
ಸಚಿವರಾದ ಟಿ.ಬಿ.ಜಯಚಂದ್ರ ಹಾಗೂ ಎಚ್.ಎಂ.ರೇವಣ್ಣ ಮೊದಲ ಪಟ್ಟಿಯಲ್ಲಿ ಸೀಟು ಗಿಟ್ಟಿಸಿದವರಲ್ಲಿ ಸೇರಿದ್ದಾರೆ. ಎರಡನೇ ಹಂತದ ಚುನಾವಣೆ 104 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ನಡೆಯಲಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು












Click it and Unblock the Notifications