ಖ್ಯಾತ ನಟಿ ಸೌಂದರ್ಯ ವಿಮಾನ ಅಪಘಾತದಲ್ಲಿ ದುರ್ಮರಣ
ಖ್ಯಾತ ನಟಿ ಸೌಂದರ್ಯ ವಿಮಾನ ಅಪಘಾತದಲ್ಲಿ ದುರ್ಮರಣ
ಬಿಜೆಪಿ ಪರ ಪ್ರಚಾರಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ದುರಂತ
ಅಗ್ನಿ ಎವಿಯೇಷನ್‌ಗೆ ಸೇರಿದ ನಾಲ್ಕು ಆಸನಗಳ ಮಿನಿ ವಿಮಾನ(Cessna-180 single engine aircraft)ದಲ್ಲಿ ಆಂಧ್ರಪ್ರದೇಶದ ಕರೀಂನಗರಕ್ಕೆ ಬಿಜೆಪಿ ಪರ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ಜಕ್ಕೂರಿನಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಟಿ ಸೌಂದರ್ಯ ಸೇರಿದಂತೆ ನಾಲ್ಕು ಮಂದಿ ದುರ್ಮರಣ ಹೊಂದಿದ್ದಾರೆ. ನಿಧನರಾದವರಲ್ಲಿ ಸೌಂದರ್ಯ ಸೋದರ ಅಮರನಾಥ್ ಕೂಡ ಸೇರಿದ್ದಾರೆ. ನೆಲದಿಂದ ಹಾರುವ ಸಂದರ್ಭದಲ್ಲಿ ವಿಮಾನಕ್ಕೆ ಬೆಂಕಿ ತಗುಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅನಂತಕುಮಾರ್ ತಿಳಿಸಿದ್ದಾರೆ.
ಸೌಂದರ್ಯ ಅವರ ವಿವಾಹ ಕೆಲವು ತಿಂಗಳ ಹಿಂದಷ್ಟೇ ನಡೆದಿತ್ತು . ಕನ್ನಡ ಸೇರಿದಂತೆ ತಮಿಳು, ತೆಲುಗು ಚಿತ್ರರಂಗದಲ್ಲೂ ಹೆಸರು ಮಾಡಿದ್ದ ಸೌಂದರ್ಯ, ಕಳೆದ ವರ್ಷ ಗಿರೀಶ್ ಕಾಸರವಳ್ಳಿ ನಿರ್ದೇಶನದಲ್ಲಿ ದ್ವೀಪ ಎನ್ನುವ ಕನ್ನಡ ಚಿತ್ರ ನಿರ್ಮಿಸಿ, ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ದ್ವೀಪ ಚಿತ್ರಕ್ಕೆ ಸ್ವರ್ಣ ಕಮಲ ಪ್ರಶಸ್ತಿ ದೊರೆತಿದೆ.
ನಿಧನರಾದವರಲ್ಲಿ ವಿಮಾನದ ಪೈಲಟ್ ಫಿಲಿಪ್ ಕೂಡ ಸೇರಿದ್ದಾನೆ ಎಂದು ರಾಜ್ಯ ಪೊಲೀಸ್ ವರಿಷ್ಠ ಟಿ.ಮಡಿಯಾಳ್ ತಿಳಿಸಿದ್ದಾರೆ.
ಮನೆ ಮನೆ ಮಾತು : 32 ವರ್ಷದ ಸೌಂದರ್ಯ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯ ಸುಮಾರು 60 ಚಿತ್ರಗಳಲ್ಲಿ ನಟಿಸಿದ್ದರು. ಬೆಂಗಳೂರಿನ ಹುಡುಗಿಯಾದರೂ ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಅವಕಾಶಗಳನ್ನು ಪಡೆಯದ ಸೌಂದರ್ಯ, ತೆಲುಗು ಚಿತ್ರರಂಗದಲ್ಲಿ ಖ್ಯಾತಿಯ ಉತ್ತುಂಗಕ್ಕೇರಿದ್ದರು. ಕೌಟುಂಬಿಕ ಚಿತ್ರಗಳಲ್ಲಿ ನಟಿಸುವ ಮೂಲಕ ಸೌಂದರ್ಯ ಹೆಂಗಳೆಯರ ಮೆಚ್ಚಿನ ನಟಿಯಾಗಿದ್ದರು. ದ್ವೀಪ, ದೋಣಿ ಸಾಗಲಿ ಹಾಗೂ ಸಿಪಾಯಿ ಸೌಂದರ್ಯ ಅವರಿಗೆ ಕನ್ನಡದಲ್ಲಿ ಹೆಸರು ತಂದುಕೊಟ್ಟಿದ್ದ ಚಿತ್ರಗಳು.
ಸೌಂದರ್ಯ ಅವರ ಸಾವಿನ ಸುದ್ದಿ ತಿಳಿದ ತಕ್ಷಣ , ಚುನಾವಣಾ ಪ್ರಚಾರದಲ್ಲಿದ್ದ ಮುಖ್ಯಮಂತ್ರಿ ಎಸ್ಸೆಂ. ಕೃಷ್ಣ ಹಾಗೂ ಬಿಜೆಪಿ ಅಧ್ಯಕ್ಷ ಅನಂತಕುಮಾರ್ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications