ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮರು ಮತದಾನ : ಕಾರಿಗನೂರಲ್ಲಿ ಜಟಾಪಟಿ, ಗಾಳಿಯಲ್ಲಿ ಗುಂಡು

By Staff
|
Google Oneindia Kannada News

ಮರು ಮತದಾನ : ಕಾರಿಗನೂರಲ್ಲಿ ಜಟಾಪಟಿ, ಗಾಳಿಯಲ್ಲಿ ಗುಂಡು
ರಾಜ್ಯದ 71 ಮತಗಟ್ಟೆಗಳಲ್ಲಿ ಮರು ಮತದಾನ

ದಾವಣಗೆರೆ : ಜಿಲ್ಲೆಯ ಕಾರಿಗನೂರಿನಲ್ಲಿ , ಏಪ್ರಿಲ್‌ 22ರ ಗುರುವಾರದ ಮರು ಮತದಾನದ ಸಂದರ್ಭದಲ್ಲಿ ಪರಸ್ಪರ ಜಗ್ಗಾಟದಲ್ಲಿ ತೊಡಗಿದ್ದ ಕಾಂಗ್ರೆಸ್‌ ಮತ್ತು ಜಾತ್ಯತೀತ ಜನತಾದಳದ ಕಾರ್ಯಕರ್ತರನ್ನು ಹತೋಟಿಗೆ ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು.

ಕಾಂಗ್ರೆಸ್‌ನ ಅಭ್ಯರ್ಥಿ ವಡ್ನಾಳ್‌ ರಾಜಣ್ಣನವರಿಗೆ ಮತದಾನದ ಬೂತ್‌ನೊಳಗೆ ಪ್ರವೇಶಿಸಲು ಅವಕಾಶ ನಿರಾಕರಿಸಿದ ಪೊಲೀಸರ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ಧರಣಿ ನಡೆಸಿದರು. ಈ ಧರಣಿಯನ್ನು ವಿರೋಧಿಸಿ ಜಾತ್ಯತೀತ ಜನತಾದಳದ ಕಾರ್ಯಕರ್ತರು ಪ್ರತಿಧರಣಿ ಪ್ರಾರಂಭಿಸಿದಾಗ ಉಂಟಾದ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು.

ಗುಂಡು ಹಾರಿಸುವ ಮುನ್ನ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಆನಂತರ ಅಶ್ರುವಾಯು ಷೆಲ್‌ಗಳನ್ನು ಸಿಡಿಸಲಾಯಿತು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬರದ ಕಾರಣ ಗುಂಡು ಹಾರಿಸುವುದು ಅನಿವಾರ್ಯವಾಯಿತು. ಈ ಘಟನೆಯಲ್ಲಿ ಯಾವುದೇ ಸಾವುನೋವಿನ ಪ್ರಕರಣ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ 71 ಮತಗಟ್ಟೆಗಳಲ್ಲಿ ಗುರುವಾರ ಮರು ಮತದಾನ ನಡೆದಿದೆ.

(ಪಿಟಿಐ)

ಮುಖಪುಟ / ಕುರುಕ್ಷೇತ್ರ-2004

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X