ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂತರ್ಜಾಲದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಪಠ್ಯಪುಸ್ತಕಗಳು

By Super
|
Google Oneindia Kannada News

ಬೆಂಗಳೂರು : ಶೀಘ್ರದಲ್ಲೇ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಪಠ್ಯ ಪುಸ್ತಕಗಳು ಸುಲಭವಾಗಿ ದೊರಕಲಿದೆ. ಎಲ್ಲವೂ ಅಂತರ್ಜಾಲದ ಮಹಾತ್ಮೆ !

ಭಾರತದಲ್ಲೇ ಮೊದಲ ಬಾರಿಗೆ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಪಠ್ಯ ಪುಸ್ತಕಗಳನ್ನು ಅಂತರ್ಜಾಲದಲ್ಲಿ ಅಳವಡಿಸಲಿದೆ. ಪ್ರಯೋಗಾರ್ಥವಾಗಿ ಈಗ ಹತ್ತನೇ ತರಗತಿಯ ಪಠ್ಯ ಪುಸ್ತಕಗಳನ್ನು ಅಳವಡಿಸುವ ಕಾರ್ಯ ಮುಗಿದಿದ್ದು , ಎನ್‌ಐಸಿ ಪರಿಶೀಲಿಸಿ ಒಪ್ಪಿಗೆ ನೀಡಿದ ಬಳಿಕ ಒಂದರಿಂದ ಹತ್ತರವರೆಗೆ ಎಲ್ಲಾ ಪಠ್ಯ ಪುಸ್ತಕಗಳು ಅಂತರ್ಜಾಲದಲ್ಲಿ ಕಾಣಿಸಿಕೊಳ್ಳಲಿವೆ. ಅಂತರ್ಜಾಲದಲ್ಲಿ ಪುಸ್ತಕಗಳು ದೊರಕುವುದರಿಂದ ಸಾರ್ವಜನಿಕರು ತಮ್ಮ ಆಭಿಪ್ರಾಯ ಮತ್ತು ವಿಮರ್ಶೆಗಳನ್ನು ಮುಕ್ತವಾಗಿ ವ್ಯಕ್ತಪಡಿಸಬಹುದಾಗಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೆರವಿನೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಶೋಧನೆ ಮತ್ತು ತರಬೇತಿ ವಿಭಾಗವು ನೋಡಿ ಕಲಿ ಎಂಬ ಉಪಗ್ರಹ ಆಧಾರಿತ ಶಿಕ್ಷಣ ಯೋಜನೆಯನ್ನು ಜಾರಿಗೆ ತರಲು ಸಿದ್ಧವಾಗಿದೆ. ಈ ಶಿಕ್ಷಣ ಪದ್ಧತಿಯನ್ನು ರಾಜ್ಯದ 129 ಆಯ್ದ ಶಾಲೆಗಳಲ್ಲಿ ಪ್ರಯೋಗಾರ್ಥವಾಗಿ ಜಾರಿಗೊಳಿಸಲಾಗುವುದು ಎಂದು ಇಲಾಖೆ ಹೇಳಿದೆ.(ಇನ್ಫೋ ವಾರ್ತೆ)

English summary
In future, children can browse Primary and high school text books
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X