ಚಿತ್ರದುರ್ಗದಿ ದಲಿತ ಸಂಘಟನೆಗಳಿಂದ ಸಚಿವ ಡಿಕೆಶಿ ಪ್ರತಿಕೃತಿ ದಹನ
ಚಿತ್ರದುರ್ಗದಿ ದಲಿತ ಸಂಘಟನೆಗಳಿಂದ ಸಚಿವ ಡಿಕೆಶಿ ಪ್ರತಿಕೃತಿ ದಹನ
ಅಂಬೇಡ್ಕರ್ ಕಟೌಟಿಗೆ ಡಿಕೆಶಿ ಹಾಗೂ ಬೆಂಬಲಿಗರಿಂದ ಅವಮಾನ ?
ಸಚಿವ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಸಾತನೂರಿನಲ್ಲಿ ಸಂವಿಧಾನ ಇಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಕಟೌಟಿಗೆ ಬೆಂಕಿ ಹಚ್ಚಿ ಅವಮಾನ ಮಾಡಿದ್ದಾರೆ ಎಂದು ಈ ಸಂಘಟನೆಗಳು ಆರೋಪಿಸಿವೆ. ಪ್ರತಿಭಟನಾಕಾರರು ನಗರದ ಪ್ರಮುಖ ಬೀದಿಯಲ್ಲಿ ಡಿಕೆಶಿ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ಬಳಿಕ ಡಿಕೆಶಿ ಕೃತ್ಯವನ್ನು ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ವಿವಿಧ ದಲಿತ ಸಂಘಟನೆಯ ಮುಖಂಡರು ಈ ಪ್ರತಿಭಟನೆಯಲ್ಲಿ ಹಾಜರಿದ್ದರು.
ಶಿವಕುಮಾರ್ ವಿರುದ್ಧ ಸಾತನೂರಿನಲ್ಲಿ ಸ್ಪರ್ಧೆಯಾಡ್ಡಿರುವ ಬಹುಜನ ಸಮಾಜವಾದಿ ಪಕ್ಷದ ಮುನಿಯಪ್ಪ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದು , ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಶಿವಕುಮಾರ್ ಹಾಗೂ ಅವರ ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications