ಸುವರ್ಣ ಚತುಷ್ಪಥ ಹೆದ್ದಾರಿ ಯೋಜನೆ ಮುಂದುವರಿಕೆ -ಮುನಿಯಪ್ಪ
ಸುವರ್ಣ ಚತುಷ್ಪಥ ಹೆದ್ದಾರಿ ಯೋಜನೆ ಮುಂದುವರಿಕೆ -ಮುನಿಯಪ್ಪ
ಅಪೂರ್ಣ ಯೋಜನೆಗಳ ಪೂರ್ಣಗೊಳಿಸಲು ಆದ್ಯತೆ
ಎನ್‌ಡಿಎ ಸರ್ಕಾರದ ಒಳ್ಳೆಯ ಯೋಜನೆಗಳಲ್ಲಿ ಸುವರ್ಣ ಚತುಷ್ಪಥ ಹೆದ್ದಾರಿ ಕಾಮಗಾರಿಯೂ ಒಂದು. ಈ ಯೋಜನೆಯನ್ನು ನಾವು ಪೂರ್ಣಗೊಳಿಸಲಿದ್ದೇವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆಯ ರಾಜ್ಯ ಸಚಿವ ಕೆ. ಎಚ್. ಮುನಿಯಪ್ಪ ಹೇಳಿದರು. ಅವರು ಮೇ 24ರ ಸೋಮವಾರ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಹೆದ್ದಾರಿ ಯೋಜನೆಯನ್ನು ನಿಮ್ಮ ಸರ್ಕಾರ ವಿಸ್ತರಿಸುವುದೇ ಎಂಬ ಸುದ್ದಿಗಾರರ ಪ್ರಶ್ನೆಗೆ- ಮೊದಲು ಅರ್ಧಕ್ಕೆ ನಿಂತಿರುವ ಯೋಜನೆಗಳನ್ನು ಮುಗಿಸುತ್ತೇವೆ. ಆಮೇಲೆ ಯೋಜನೆಯ ವಿಸ್ತರಣೆಯ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ಸತ್ಯಾನಂದ ದುಬೆ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ಸಚಿವ ಮುನಿಯಪ್ಪ ನಿರಾಕರಿಸಿದರು.
(ಪಿಟಿಐ)
ಮುಖಪುಟ / ಕುರುಕ್ಷೇತ್ರ-2004












Click it and Unblock the Notifications