ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧರ್ಮಸಿಂಗ್‌ ಪ್ರಮಾಣವಚನ; ಕಾಂಗ್ರೆಸ್‌-ಜೆಡಿಎಸ್‌ಸರ್ಕಾರಅಸ್ತಿತ್ವಕ್ಕೆ

By Staff
|
Google Oneindia Kannada News

ಧರ್ಮಸಿಂಗ್‌ ಪ್ರಮಾಣವಚನ; ಕಾಂಗ್ರೆಸ್‌-ಜೆಡಿಎಸ್‌ಸರ್ಕಾರಅಸ್ತಿತ್ವಕ್ಕೆ
ಉಪ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಎನ್‌. ಧರ್ಮಸಿಂಗ್‌ ಶಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಕಾಂಗ್ರೆಸ್‌ ಹಾಗೂ ಜಾತ್ಯತೀತ ಜನತಾದಳದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂತು.

ರಾಜಭವನದ ಹುಲ್ಲುಹಾಸಿನ ಮೇಲೆ ಶುಕ್ರವಾರ ಮಧ್ಯಾಹ್ನ 1.15ರ ಸುಮಾರಿಗೆ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನವನ್ನು ಧರ್ಮಸಿಂಗ್‌ರಿಗೆ ಬೋಧಿಸಿದರು. ಇದೇ ಸಂದರ್ಭದಲ್ಲಿ ಜಾತ್ಯತೀತ ಜನತಾದಳದ ಮುಖಂಡ ಸಿದ್ಧರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನಿಕಟಪೂರ್ವ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಸೇರಿದಂತೆ ಅನೇಕ ಕಾಂಗ್ರೆಸ್‌ ಧುರೀಣರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹಾಜರಿದ್ದರು. ಕಾಲಾವಕಾಶ ಕಡಿಮೆ ಇದ್ದುದರಿಂದ ಧರ್ಮಸಿಂಗ್‌ ಹಾಗೂ ಸಿದ್ಧರಾಮಯ್ಯ ಮಾತ್ರ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಮಂತ್ರಿಮಂಡಲ ರಚನೆ ಇನ್ನೆರಡು ಮೂರು ದಿನಗಳಲ್ಲಿ ಸಾಧ್ಯವಾಗಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಅನುಪಸ್ಥಿತಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎದ್ದು ಕಾಣುತ್ತಿತ್ತು . ಸರ್ಕಾರ ರಚನೆಯ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಉಂಟಾದ ಜಗ್ಗಾಟ ಹಾಗೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ಒಪ್ಪಲು ಸಿದ್ಧರಾಮಯ್ಯನವರು ಅನುಸರಿಸಿದ ಹಠದ ನೀತಿ ದೇವೇಗೌಡರಿಗೆ ಬೇಸರ ಉಂಟು ಮಾಡಿದೆ ಎನ್ನಲಾಗಿದೆ. ಅಲ್ಲದೆ ಕಾಂಗ್ರೆಸ್‌ನೊಂದಿಗೆ ಸರ್ಕಾರ ರಚಿಸುವ ಮುಜುಗರ ಕೂಡ ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ಗೌಡರು ದೂರವುಳಿಯಲು ಕಾರಣ ಎನ್ನಲಾಗಿದೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X