ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡುಕೊಳು ಮಾತುಕತೆ ಜಾರಿಯಲ್ಲಿ ; ಸಂಪುಟ ವಿಸ್ತರಣೆ ವಾರಾಂತ್ಯದಲ್ಲಿ

By Staff
|
Google Oneindia Kannada News

ಕೊಡುಕೊಳು ಮಾತುಕತೆ ಜಾರಿಯಲ್ಲಿ ; ಸಂಪುಟ ವಿಸ್ತರಣೆ ವಾರಾಂತ್ಯದಲ್ಲಿ
ಪ್ರಮಾಣ ವಚನ ಸ್ವೀಕಾರಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಅದ್ದೂರಿ ವೇದಿಕೆ

ನವದೆಹಲಿ : ಕಾಂಗ್ರೆಸ್‌-ಜೆಡಿಎಸ್‌ನ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಯ ಮಾತುಕತೆಗಳು ಪ್ರಗತಿಯಲ್ಲಿದ್ದು , ವಾರಾಂತ್ಯದೊಳಗೆ ಸಂಪುಟ ವಿಸ್ತರಣೆ ಸಾಧ್ಯವಾಗುವ ಕುರಿತು ಉಭಯ ಪಕ್ಷಗಳ ನಾಯಕರು ಸುಳಿವು ನೀಡಿದ್ದಾರೆ.

ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ನಿವಾಸದಲ್ಲಿ ಉಭಯ ಪಕ್ಷಗಳ ನಾಯಕರು ಮಂಗಳವಾರ ಸಭೆ ಸೇರಿ ಸಂಪುಟ ವಿಸ್ತರಣೆಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ಮತ್ತು ಉಪ ಮುಖ್ಯಮಂತ್ರಿ ಸಿದ್ಧರಾಮಯ್ಯ ವಾರಾಂತ್ಯದೊಳಗೆ ಸಂಪುಟ ವಿಸ್ತರಣೆಯಾಗುವ ಕುರಿತು ವಿಶ್ವಾಸ ವ್ಯಕ್ತಪಡಿಸಿದರು.

ಸಂಪುಟ ವಿಸ್ತರಣೆಯ ಕುರಿತು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಯಾವುದೇ ಗೊಂದಲವಿಲ್ಲ . ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವುದೆಲ್ಲ ಸುಳ್ಳು. ಸಮ್ಮಿಶ್ರ ಸರ್ಕಾರ ಎಂದಮೇಲೆ ಕೊಡು-ಕೊಳುವುದು ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಧರ್ಮಸಿಂಗ್‌ ಸುದ್ದಿಗಾರರ ಪ್ರಶ್ನೆಯಾಂದಕ್ಕೆ ಉತ್ತರಿಸಿದರು. ಸಂಪುಟ ವಿಸ್ತರಣೆಯ ಬಗೆಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮಾಜಿ ಪ್ರಧಾನಿ ದೇವೇಗೌಡ- ಧರ್ಮಸಿಂಗ್‌ ಹಾಗೂ ಸಿದ್ಧರಾಮಯ್ಯ ನೇತೃತ್ವದ ಸಮ್ಮಿಶ್ರ ಸರ್ಕಾರ 5 ವರ್ಷಗಳ ಕಾಲ ಆಡಳಿತ ನಡೆಸಲಿದೆ ಎಂದರು.

ಕುಲಾವಿ ಸಜ್ಜುಗೊಳ್ಳುತ್ತಿದೆ !

ಸಂಪುಟ ವಿಸ್ತರಣೆಯ ಮಾತುಕತೆಗಳು ಇನ್ನೂ ಜಾರಿಯಲ್ಲಿರುವಾಗಲೇ, ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ಅದ್ದೂರಿ ವೇದಿಕೆ ಸಜ್ಜುಗೊಳ್ಳುತ್ತಿದೆ.

ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ರಾಜಭವನದಲ್ಲಿ ಉಂಟಾದ ಅಹಿತಕರ ವಾತಾವರಣ ಮರುಕಳಿಸುವುದನ್ನು ತಡೆಗಟ್ಟುವ ಉದ್ದೇಶದಿಂದ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X