ಪ್ರಧಾನಿ ಸೂಚನೆ ಮೇರೆಗೆ ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು
ಪ್ರಧಾನಿ ಸೂಚನೆ ಮೇರೆಗೆ ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು
ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಣಯ: ಮುಖ.್ಯಮಂತ್ರಿ
ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ ಪ್ರಧಾನಿ ರಾಜ್ಯದ ಮುಖ್ಯಮಂತ್ರಿ ಧರ್ಮಸಿಂಗ್ ಅವರಿಗೆ ಕರೆ ಮಾಡಿ ನೀರು ಬಿಡುವಂತೆ ಸೂಚಿಸಿದರು. ತಕ್ಷಣ ತನ್ನ ಸಚಿವ ಸಂಪುಟದ ಸಭೆ ಕರೆದು ಚರ್ಚಿಸಿದ ಮುಖ್ಯಮಂತ್ರಿ ನೀರು ಬಿಡಲು ಆದೇಶಿಸಿದ್ದಾರೆ. ಕಾವೇರಿ ನದಿ ಪ್ರದೇಶದಲ್ಲಿ ತೀವ್ರ ಮಳೆಯಾಗುತ್ತಿದೆ.
ಉತ್ತಮ ಮಳೆಯಾಗುತ್ತಿರುವ ಕಾರಣ ಜಲಾಶಯಗಳೆಲ್ಲ ಭರ್ತಿಯಾಗುತ್ತಿವೆ. ನೀರಿನ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ.್ಯಮಂತ್ರಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಕಾವೇರಿ












Click it and Unblock the Notifications