ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ ರಿಗೆ 2004ರ ‘ನಿರಂಜನ’ ಪ್ರಶಸ್ತಿ

ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ ರಿಗೆ 2004ರ ‘ನಿರಂಜನ’ ಪ್ರಶಸ್ತಿ
ಜುಲೈ 10ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

ಪುತ್ತೂರು: 2004ನೇ ಸಾಲಿನ ನಿರಂಜನ ಪ್ರಶಸ್ತಿಯನ್ನು ಹಿರಿಯ ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ ಅವರಿಗೆ ನೀಡಿ ಗೌರವಿಸಲು ಶಿವರಾಮ ಕಾರಂತ ಅಧ್ಯಯನ ಕೇಂದ್ರವು ನಿರ್ಧರಿಸಿದೆ.

ಪ್ರಶಸ್ತಿಯು ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಜುಲೈ 10ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ.

ಈ ಸಂದರ್ಭದಲ್ಲಿ ಭೈರಪ್ಪನವರ ಕೃತಿಗಳ ಕುರಿತು ವಿಚಾರಗೊಷ್ಠಿಯನ್ನು ಏರ್ಪಡಿಸಲಾಗಿದೆ. ಡಾ.ರಾಮಚಂದ್ರ ದೇವ ಅಧ್ಯಕ್ಷತೆಯಲ್ಲಿ ಡಾ.ವರದರಾಜ ಚಂದ್ರಗಿರಿ ಮತ್ತು ಡಾ.ಕಮಲಾಕ್ಷ ಪ್ರಬಂಧ ಮಂಡಿಸುವರು ಎಂದು ಅಧ್ಯಯನ ಕೇಂದ್ರದ ಉಪನಿರ್ದೇಶಕ ಡಾ.ಶ್ರೀಧರ ಎಚ್‌.ಜಿ.ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+